ರಾಜ್ಯದ ಎಲ್ಲ ವಾಹನ ಸವಾರರು ಮೇ 31ರೊಳಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಜೂ.1ರಿಂದ ದಂಡ ವಸೂಲಿ ಮಾಡುವುದಾಗಿ ಸಾರಿಗೆ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು (ಮೇ 09): ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಆದೇಶದಂತೆ ರಾಜ್ಯದಲ್ಲಿ ಕರ್ನಾಟಕ ಸಾರಿಗೆ ಇಲಾಖೆಯಿಂದ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ವಾಹನ ಸವಾರರ ಮನವಿಗೆ ಓಗೊಟ್ಟಿದ್ದ ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ. ಈಗ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಣೆಗೆ ಸರ್ಕಾರ ನಿರಾಸಕ್ತಿ ತೋರಿದ್ದು, ಜೂನ್ ತಿಂಗಳಿಂದ ದಂಡ ವಸೂಲಿ ಮಾಡಲು ನಿರ್ಧರಿಸಿದೆ.

ಹೌದು, ರಾಜ್ಯದ ವಾಹನ ಸವಾರರು ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಆಸಕ್ತಿ ತೋರಿಸುತ್ತಿಲ್ಲ. ಏಪ್ರಿಲ್ 2019 ಕ್ಕಿಂತ ಮೊದಲು ರಾಜ್ಯದಲ್ಲಿ ನೋಂದಣಿ ಮಾಡಿಕೊಂಡ ಎಲ್ಲ ದ್ವಿಚಕ್ರ, ತ್ರಿಚಕ್ರ ವಾಹನಗಳು, ಕಾರುಗಳು, ಲಘು, ಮಧ್ಯಮ ಮತ್ತು ಭಾರಿ ವಾಹನಗಳಿಗೆ ಈ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ನಿಯಮ ಅನ್ವಯವಾಗಲಿದೆ. ಈವರೆಗೆ ರಾಜ್ಯದಲ್ಲಿ 34 ಲಕ್ಷ ವಾಹನಗಳಿಗೆ ಮಾತ್ರ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡಲಾಗಿದೆ. ಈಗ ಮೇ 31 ರೊಳಗೆ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದ್ದ, 21 ದಿನವಷ್ಟೇ ಬಾಕಿಯಿದೆ. ಹೀಗಿರುವಾಗ, ಇನ್ನೂ 1.56 ಕೋಟಿ ವಾಹನಗಳಿಗೆ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವುದು ಬಾಕಿಯಿದೆ.

HSRP ನಂಬರ್ ಪ್ಲೇಟ್ ಅಳವಡಿಸದವರಿಗೆ ಗುಡ್ ನ್ಯೂಸ್ ನೀಡುತ್ತಾ ಕರ್ನಾಟಕ ಸರ್ಕಾರ?

ಈಗಾಗಲೇ ಸಾರಿಗೆ ಇಲಾಖೆಯಿಂದ ರಾಜ್ಯದ ವಾಹನ ಸವಾರರಿಗೆ 3 ಬಾರಿ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಆದರೂ ವಾಹನ ಸವಾರರು ಆಸಕ್ತಿ ತೋರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ನಿರ್ಲಕ್ಷ್ಯ ತೋರಿದ ವಾಹನ ಸವಾರರಿಗೆ ದಂಡ ವಿಧಿಸಲು ಮುಂದಾಗಿದೆ. ಜೂ.1 ರಿಂದ ಎಲ್ಲ ವಾಹನಗಳಿಗೆ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳದ ವಾಹನ ಸವಾರರಿಗೆ ದಂಡಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಹೀಗಾಗಿ, ವಾಹನ ಮಾಲೀಕರ ವಿರುದ್ಧ ಸಾರಿಗೆ ಇಲಾಖೆ ದಂಡಂ ದಶಗುಣಂ ಅಸ್ತ್ರ ಪ್ರಯೋಗಕ್ಕೆ ಸಿದ್ದವಾಗಿದೆ.

ರಾಜ್ಯದಲ್ಲಿ ಜೂ.1ರೊಳಗೆ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳದ ವಾಹನ ಸವಾರರಿಗೆ ಮೊದಲು ಬಾರಿಗೆ 500 ರೂ. ದಂಡ, ಎರಡನೇ ಬಾರಿ ಸಿಕ್ಕಿ ಬಿದ್ದರೆ 1,000 ರೂ. ದಂಡ ವಿಧಿಸಲು ತೀರ್ಮಾನ ಕೈಗೊಂಡಿದೆ. 2019 ಏಪ್ರಿಲ್‌ 1ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್ ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ.

52 ಲಕ್ಷಕ್ಕೆ ಏರಿಕೆಯಾದ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ: ಜೂ.1ರಿಂದ ದಂಡ ಪ್ರಯೋಗ?

ಮೂರು ಬಾರಿ ಅವಧಿ ವಿಸ್ತರಿಸಿದ್ದ ಸಾರಿಗೆ ಇಲಾಖೆ: ಇನ್ನು ರಾಜ್ಯದಲ್ಲಿ ಕಳೆದ 2023ರ ನವೆಂಬರ್ ತಿಂಗಳ 17ಕ್ಕೆ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಿತ್ತು. ಆದರೆ, ವಾಹನ ಸವಾರರು ನಿರಾಸಕ್ತಿ ತೋರಿದ ಕಾರಣ 2024ರ ಫೆಬ್ರವರಿ 17ವರೆಗೆ ವಿಸ್ತರಣೆ ಮಾಡಲಾಗಿತ್ತು. ಆದರೂ, ಶೇ.30ರಷ್ಟು ವಾಹನ ಸವಾರರೂ ಕೂಡ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿರಲಿಲ್ಲ. ಹೀಗಾಗಿ, ವಾಹನ ಸವಾರರ ಮನವಿ ಮತ್ತು ಹೊತದೃಷ್ಟಿಯಿಂದ ಮೇ 31ವರೆಗೂ ಅವಧಿ ವಿಸ್ತರಣೆ ಮಾಡಲಾಗಿತ್ತು. ಆದರೆ, ನಿಗದಿಪಡಿಸಿರೋ ಗಡುವು ಅಂತ್ಯವಾಗಲು ಇನ್ನೂ 21 ದಿನವಷ್ಟೇ ಬಾಕಿಯಿದೆ. ಇನ್ನುಮುಂದೆ ಗಡುವು ವಿಸ್ತರಣೆ ಮಾಡಲು ಸರ್ಕಾರ ಕೂಡ ನಿರಾಸಕ್ತಿ ತೋರಿಸಿದೆ. ಈ ಹಿನ್ನೆಲೆಯಲ್ಲಿ ಡೆಡ್‌ಲೈನ್ ಒಳಗೆ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಮನವಿ ಮಾಡಿದೆ.

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಬುಕ್ ಮಾಡುವ ಮಾಹಿತಿ ಇಲ್ಲಿದೆ ನೋಡಿ...

  • https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು.
  • Book HSRP ಕ್ಲಿಕ್ ಮಾಡಿ.
  • ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ
  • ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ
  • ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ
  • HSRP ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ
  • ಮೊಬೈಲ್ ನಂಬರ್‌ಗೆ ಬರವು ಒಟಿಪಿಯನ್ನು ನಮೂದಿಸಿ
  • HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಿ