ಹೆದ್ದಾರಿಗಳಗುಂಟ 600 ಚಾರ್ಚಿಂಗ್ ಸ್ಟೇಷನ್ ಸ್ಥಾಪಿಸಲು ಪ್ಲ್ಯಾನ್

ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಬಳಕೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದೇಶಾದ್ಯಂತ ಅದಕ್ಕೆ ಸಂಬಂಧಿಸಿದ ಮೂಲಸೌಕರ್ಯ ಹೆಚ್ಚಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿಗಳಗುಂಟ 600 ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಸಂಬಂಧ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನೆ ರೂಪಿಸಿಕೊಂಡಿದೆ.

NHAI is plans to establish 600 charging stations across the highway

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಹಾಗೂ ಹಲವು ರಾಜ್ಯ ಸರ್ಕಾರಗಳು ಅನೇಕ ಉತ್ತೇಜನಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಇತ್ತೀಚೆಗಷ್ಟೇ ಗುಜರಾತ್ ಸರ್ಕಾರವು ಕೂಡ ತನ್ನ ನೂತನ ಎಲೆಕ್ಟ್ರಿಕ್ ವಾಹನ ನೀತಿಯನ್ನ ಪ್ರಕಟಿಸಿ, ಬ್ಯಾಟರಿ ಚಾಲಿತ ವಾಹನ ಖರೀದಿಗೆ 1.5 ಲಕ್ಷ ರೂ.ವರೆಗೂ ಸಬ್ಸಿಡಿ ಘೋಷಿಸಿತ್ತು. ಇದೀಗ ಕೇಂದ್ರ ಸರ್ಕಾರವು ಮತ್ತೊಂದು ಪ್ರಮುಖ ನಿರ್ಧಾರವನ್ನು ಪ್ರಕಟಿಸಿದೆ.

2030ರ ಹೊತ್ತಿಗೆ ಫಿಯೆಟ್‌ನಿಂದ ಸಂಪೂರ್ಣ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದ ಮೂಲ ಸೌಕರ್ಯವನ್ನು ಹೆಚ್ಚಿಸುವುದಕ್ಕಾಗಿ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯವು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರವು(ಎನ್‌ಎಚ್ಎಐ) ರಾಷ್ಟ್ರೀಯ ಹೆದ್ದಾರಿಗಳಗುಂಟ 600 ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಮುಂದಾಗಿದೆ.

ಎನ್ಎಚ್ಐಎ 22 ರಾಜ್ಯಗಳ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಮಾರು 600 ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಮೂಲಸೌಕರ್ಯವನ್ನು ಹೆಚ್ಚಿಸಲು ಮುಂದಾಗಿದೆ. ಈ ಚಾರ್ಜಿಂಗ್ ಸ್ಟೇಷನ್‌ಗಳನ್ನು ಜಂಟಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಖಾಸಗಿ ಕಂಪನಿಗಳ ಜಂಟಿ ಸಹಭಾಗಿತ್ವದಲ್ಲಿ  ಈ ಚಾರ್ಜಿಂಗ್ ಸ್ಟೇಷನ್‌ಗಳನ್ನು  ರಾಷ್ಟ್ರೀಯ ಹೆದ್ದಾರಿಗಳಗುಂಟ ಸ್ಥಾಪಿಸಲಾಗುತ್ತದೆ.

ಈ 600 ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಸಂಬಂಧ ಕೆಲಸ ಶುರುವಾಗಿದೆ. ಈಗಾಲೇ ಎನ್ಎಚ್ಐಎ ಮುಂಬ-ದೆಹಲಿ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಜಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಸಂಬಂಧ 90 ಸ್ಥಳಗಳನ್ನ ಗುರುತಿಸಿದೆ. ಇದರ ಜೊತೆಗೆ ಹೊಸ ಎಕ್ಸ್‌ಪ್ರೇಸ್‌ವೇಯ್ಸ್ ಮತ್ತು ಹೈವೇಯ್ಸ್‌ಗುಂಟ 400 ಜಾರ್ಚಿಂಗ್ ಸ್ಟೇಷನ್‌ಗಳನ್ನ ಸ್ಥಾಪಿಸಲಾಗುತ್ತದೆ. ಇನ್ನುಳಿದ ಸ್ಟೇಷನ್‌ಗಳನ್ನು ಇತರ ಹೆದ್ದಾರಿಗಳಗುಂಟ ಸ್ಥಾಪಿಸಲಾಗುತ್ತದೆ. 

ಎಲೆಕ್ಟ್ರಿಕ್ ವಾಹನ ಖರೀದಿಸಬೇಕಾ? ಈ ಸಂಗತಿಗಳ ಬಗ್ಗೆ ತಿಳಿದಿರಿ

ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಸಂಬಂಧ ಖಾಸಗಿ ಕಂಪನಿಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ 130 ಸ್ಥಳಗಳಲ್ಲಿ ಚಾಜ್ರಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಸಂಬಂಧ ಬಿಡ್ ಆಹ್ವಾನಿಸಲಾಗಿದೆ. ಮತ್ತು ಖಾಸಗಿ ಕಂಪನಿಗಳಿಂದ ಅತ್ಯುದ್ಭುತ ಪ್ರತಿಕ್ರಿಯೆ ಸಿಕ್ಕಿದೆ. 
 

NHAI is plans to establish 600 charging stations across the highway

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಅನೇಕ ಉತ್ತೇಜನಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಸಚಿವ ನಿತಿನ್ ಗಡ್ಕರಿ ಹೇಳಿದ್ದರು. ಮುಂದಿನ ಕೆಲವೇ ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಬಗ್ಗೆ ಹೇಳಿದ್ದಾರೆ. ಈ ದಶಕದ ಅಂತ್ಯಕ್ಕೆ ದೇಶದಲ್ಲಿ ಶೇ.70ರಷ್ಟು ವಾಣಿಜ್ಯ ಬಳಕೆಯ ಕಾರುಗಳು, ಶೇ.30ರಷ್ಟು ಖಾಸಗಿ ಕಾರುಗಳು, ಶೇ.40 ಬಸ್‌ಗಳು ಮತ್ತು ಶೇ.80 ದ್ವಿಚಕ್ರವಾಹನಗಳು ಬ್ಯಾಟರಿ ಚಾಲಿತ ವಾಹನಗಳಾಗಿರುವಂತೆ ಪ್ರಯತ್ನಿಸಲಾಗುವುದು ಎಂದು ಅವರು ಇತ್ತೀಚೆಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಎಲೆಕ್ಟ್ರಿಕ್ ಕಾರ್ ಖರೀದಿಗೆ 1.50 ಲಕ್ಷ ರೂ.ವರೆಗೆ ಸಬ್ಸಿಡಿ, ನೋಂದಣಿ ಫ್ರೀ!
ಗುಜರಾತ್ ಸರ್ಕಾರವು ಎಲೆಕ್ಟ್ರಿಕ್ ವಾಹನ ನೀತಿಯನ್ನು ಪ್ರಕಟಿಸಿದೆ. ಗುಜರಾತ್‌ನಲ್ಲಿ ನೀವು ಎಲೆಕ್ಟ್ರಿಕ್ ಕಾರ್ ಖರೀದಿಸಿದರೆ ಸುಮಾರು 1.5 ಲಕ್ಷ ರೂಪಾಯಿವರೆಗೂ ಸಬ್ಸಿಡಿ ಸಿಗಲಿದೆ. ಹಾಗೆಯೇ, ಬ್ಯಾಟರಿ ಚಾಲಿತ ದ್ವಿಚಕ್ರವಾಹನವನ್ನು ಖರೀದಿಸಿದರೆ 20 ಸಾವಿರ ರೂಪಾಯಿವರೆಗೂ ಲಾಭ ದೊರೆಯಲಿದೆ. ಕೇಂದ್ರ ಸರ್ಕಾರದ ಒದಗಿಸಿದ ಫೆಮ್ ಎರಡು ಸಬ್ಸಿಡಿಯ ಹೊರತಾಗಿ ಗುಜರಾತ್ ಈ ಸಬ್ಸಿಡಿಗಳನ್ನು ನೀಡುತ್ತಿದೆ. ಜೊತೆಗೆ ರಾಜ್ಯಾದ್ಯಂತ ರಾಜ್ಯಾದ್ಯಂತ 250 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 10 ಲಕ್ಷದವರೆಗೆ 25% ಬಂಡವಾಳ ಸಹಾಯಧನವನ್ನೂ ನೀಡಲಿದೆ.

ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆಯಲ್ಲೂ 17,800 ರೂ.ವರೆಗೆ ಕಡಿತ!

ಈ ಹೊಸ ನೀತಿಯ ಪ್ರಕಾರ, ಗುಜರಾತ್‌ನಲ್ಲಿ ಮುಂದಿನ ನಾಲ್ಕು ವರ್ಷದಲ್ಲಿ ಸುಮಾರು 2 ಲಕ್ಷ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಅಂದಾಜು 670 ಕೋಟಿ ರೂಪಾಯಿ ಒದಗಿಸಲು ನಿರ್ಧರಿಸಲಾಗಿದೆ. ಆ ಮೂಲಕ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಖರೀದಿಗೆ ಪ್ರೋತ್ಸಾಹ ನೀಡಲು ಗುಜರಾತ್ ಸರ್ಕಾರ ಮುಂದಾಗಿದೆ.

Latest Videos
Follow Us:
Download App:
  • android
  • ios