2047ಕ್ಕೆ 32 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕತೆ ಗುರಿ: ಪ್ರಲ್ಹಾದ್ ಜೋಶಿ

  • 32 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕತೆ ಗುರಿ
  • 2047ರ ವೇಳೆ 32 ಟ್ರಿಲಿಯನ್‌ ಮೌಲ್ಯದ ಆರ್ಥಿಕ ಶಕ್ತಿಯಾಗುವ ಕನಸಿದೆ
  • ಈಗಿನಿಂದಲೇ ಕಾರ್ಯಪ್ರವೃತ್ತರಾದರೆ ಇದು ಸಾಧ್ಯ: ಪ್ರಹ್ಲಾದ ಜೋಶಿ
32 trillion dollar economy  2047 says Pralhad Joshi rav

ಹುಬ್ಬಳ್ಳಿ (ಅ.4) : 2047ರ ಹೊತ್ತಿಗೆ ದೇಶವೂ 32 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಬೇಕೆನ್ನುವ ಗುರಿ ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ಪೂರ್ವಭಾವಿಯಾಗಿ ಕರ್ನಾಟಕ ಡಿಜಿಟಲ್‌ ಮಿಷನ್‌ ಸೋಮವಾರ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ‘ಬಿಯಾಂಡ್‌ ಬೆಂಗಳೂರು- 2022 ‘ಟೆಕ್ಸಿಲರೇಷನ್‌’ ಔದ್ಯಮಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ರಾಹುಲ್ ಗಾಂಧಿಯನ್ನು ಯಾರು ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶ. ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದ್ದೇವೆ. 2047ರ ಭಾರತದ ಸ್ವಾತಂತ್ರ್ಯೋತ್ಸವದ ಶತಮಾನೋತ್ಸವ. ಆಗ ನಮ್ಮ ದೇಶದ್ದು 32 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕತೆ ಶಕ್ತಿಯಾಗಿ ಹೊರಹೊಮ್ಮಬೇಕೆನ್ನುವ ಗುರಿ ಇದೆ. ಆ ನಿಟ್ಟಿನಲ್ಲಿ ಕರ್ನಾಟಕದ ಪಾತ್ರ ಏನಿರಬೇಕು? ಪ್ರತಿಯೊಂದು ರಿಜನ್‌ನ ಪಾತ್ರ ಏನಿರಬೇಕು ಎಂಬುದನ್ನು ಈಗಲೇ ನಿರ್ಧರಿಸಿ ಅದನ್ನು ಸಾಧಿಸುವತ್ತ ಹೆಜ್ಜೆ ಇಡಬೇಕು ಎಂದರು.

ಇದು ಸಾಧ್ಯವಾಗಬೇಕೆಂದರೆ ಉದ್ಯಮಿಗಳ ಮನೋಭಾವ ಬದಲಿಸಬೇಕಿದೆ. ಬೆಂಗಳೂರಿನ ವ್ಯಾಮೋಹದಿಂದ ಉದ್ಯಮಿಗಳು ಹೊರ ಬರಬೇಕು. ಈ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಬೆಂಗಳೂರಿನ ಮೋಹದಿಂದ ಹೊರಬಂದು 2ನೇ ಮತ್ತು 3ನೇ ಸ್ತರದ ನಗರಗಳಲ್ಲಿ ಉದ್ದಿಮೆಗಳು ಸ್ಥಾಪಿಸುವಂತಾಗಬೇಕು. ಕೇಂದ್ರ ಸರ್ಕಾರವೂ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಕೈಗಾರಿಕೆ ಸ್ಥಾಪನೆ ವಿಷಯ ಸೇರಿದಂತೆ ಅಭಿವೃದ್ಧಿ ವಿಷಯದಲ್ಲಿ ಕೇಂದ್ರ ಸರ್ಕಾರ ಸದಾ ಬದ್ಧ. ಈ ವಿಷಯವಾಗಿ ರಾಜ್ಯಕ್ಕೆ ಅಗತ್ಯ ಸಹಕಾರ ನೀಡಲು ಸಿದ್ಧ ಎಂದು ಜೋಶಿ ತಿಳಿಸಿದರು.

ಬಿಯಾಂಡ್‌ ಬೆಂಗಳೂರು ತರಹದ ಉಪಕ್ರಮಗಳು ಸ್ವಾಗತಾರ್ಹ. ಇವು ತ್ವರಿತಗತಿಯಲ್ಲಿ ನಡೆಯಬೇಕಾಗಿವೆ ಎಂದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.

ಧಾರವಾಡ: ಶೀಘ್ರದಲ್ಲೇ  IIT Campus ಉದ್ಘಾಟನೆ - ಪ್ರಲ್ಹಾದ್ ಜೋಶಿ

ಕೋವಿಡ್‌ ನಂತರ ಭಾರತವು ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಹಣದುಬ್ಬರ ನಿಯಂತ್ರಣದಲ್ಲಿದೆ. ಪಿಎಂ ಗತಿಶಕ್ತಿ ಯೋಜನೆಯಡಿ ತುಮಕೂರು-ದಾವಣಗೆರೆ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಒತ್ತು ಕೊಡಲಾಗಿದ್ದು, ಹುಬ್ಬಳ್ಳಿ-ಬೆಂಗಳೂರು ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಒಪ್ಪಿಗೆ ನೀಡಲಾಗಿದೆ. ಈ ವರ್ಷದ ಡಿಸೆಂಬರ್‌ ಹೊತ್ತಿಗೆ ಹುಬ್ಬಳ್ಳಿ-ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಸಂಪೂರ್ಣವಾಗಲಿದೆ ಎಂದು ವಿವರಿಸಿದರು. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಹಲವು ನಗರಗಳು ಉದ್ಯಮಗಳ ಸ್ಥಾಪನೆಗೆ ಹೇಳಿ ಮಾಡಿಸಿದ ಜಾಗೆ. ಇಲ್ಲಿ ಪ್ರವಾಹ ಬರಲ್ಲ. ಸಂಪರ್ಕ ಅತ್ಯಂತ ಸುಸಜ್ಜಿತವಾಗಿದೆ ಎಂದರು.

Latest Videos
Follow Us:
Download App:
  • android
  • ios