ಧಾರವಾಡ, (ಮಾ.22): ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಹೃದಯಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಶುಕ್ರವಾರದಿಂದ ಆರಂಭವಾಗಿ ಮಾ.24ರವರೆಗೆ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ. ಶಿವಕುಮಾರ್​ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ.

ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ತೀವ್ರ ಹೃದಯಾಘಾತದಿಂದ ನಿಧನ

ಈ ಮೂರು ದಿನಗಳ ಕಾಲ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಇಳಿಸಬೇಕು. ಎಲ್ಲ ಅಧಿಕೃತ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಬೇಕು. ಇನ್ನು ನಾಳೆ [ಮಾರ್ಚ್ 22] ಧಾರವಾಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.  

ಆದ್ರೆ ಎಸ್​​ಎಸ್​​ಎಲ್​​ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳು, ಸಿಬ್ಬಂದಿಗಳ ಹೊರತುಪಡಿಸಿ ಜಿಲ್ಲೆಯಲ್ಲಿ ರಜೆ ಪ್ರಕಟಿಸಲಾಗಿದೆ. ಎಸ್ ಎಸ್ ಎಲ್ ಎಸಿ ಪರೀಕ್ಷೆಗಳು ಅಬಾಧಿತವಾಗಿ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ನಾಳೆ [ಶನಿವಾರ] ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಶಿವಳ್ಳಿ ಕುಟುಂಬದ ಮೂಲಗಳು ತಿಳಿಸಿವೆ.