ಹುಬ್ಬಳ್ಳಿ(ನ.9): ಅಯೋಧ್ಯೆ ರಾಮಮಂದಿರದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ. ನ್ಯಾಯಾಲಯ ದೇಶದ ಸೌಹಾರ್ದತೆಗೆ ಪೂರಕವಾದ ತೀರ್ಪನ್ನು ನೀಡಿದೆ. ಈ ತೀರ್ಪನ್ನು ಸಮಚಿತ್ತದಿಂದ ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. 

ಅಯೋಧ್ಯೆ ತೀರ್ಪು ಪ್ರಕಟಿಸಲಿರುವ ಐವರು ನ್ಯಾಯಾಧೀಶರಿವರು

ಶನಿವಾರ ನಗರದಲ್ಲಿ ಮಾತನಾಡಿದ ಅವರು, ಭಾರತ ದೇಶದ ಅಸ್ಮಿತೆ ಇರುವುದು ಸರ್ವಧರ್ಮ ಸೌಹಾರ್ಧತೆಯಲ್ಲಿ. ಇದನ್ನು ಯಾರ ಪರವಾದ, ವಿರೋಧವಾದ ತೀರ್ಪು ಅಂತಾ ಭಾವಿಸಬಾರದು‌. ಸುಪ್ರೀಂಕೋರ್ಟ್ ನಿರ್ದೇಶನವನ್ನು ಕೇಂದ್ರ ಸರ್ಕಾರ ಸಮರ್ಪಕವಾಗಿ ಜಾರಿಗೆ ತರುತ್ತೆ ಎಂದು ತಿಳಿಸಿದ್ದಾರೆ. 

ಯಾರೂ ಗೆಲ್ಲಲ್ಲ, ಯಾರೂ ಸೋಲಲ್ಲ: ಸಾಮರಸ್ಯ ಕಾಪಾಡೋಣ ಎಂದ ಮೋದಿ!

ತೀರ್ಪಿನಿಂದ ಹಿಂದೂ, ಮುಸ್ಲಿಂಸ ಮುದಾಯಕ್ಕೆ ಸಮಾನ ನ್ಯಾಯ ಸಿಕ್ಕಿದೆ. ಒಂದು ಸಂಘಟನೆಯಾಗಿ ರಾಮ ಮಂದಿರಕ್ಕಾಗಿ ಹೋರಾಟ ಮಾಡಿದ್ದೆವು. ವಿವಾದ ಹೈಕೋರ್ಟ್‌ಗೆ ಹೋದ ನಂತರ ನ್ಯಾಯಾಲಯದ ಆದೇಶಕ್ಕೆ ಬದ್ಧರಾಗಿ ಇದ್ದೇವೆ ಎಂದು ಹೇಳಿದ್ದಾರೆ. 

ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!

ದೇಶ ಕಾತರದಿಂದ ಕಾಯುತ್ತಿದ್ದ ಐತಿಹಾಸಿಕ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ತೀರ್ಪನ್ನು ಕೊನೆಗೂ ಸುಪ್ರೀಂಕೋರ್ಟ್ ಪ್ರಕಟಿಸಿದೆ. ವಿವಾದಿತ 2.77 ಎಕರೆ ಜಾಗವನ್ನು ರಾಮಲಲ್ಲಾಗೆ ವಹಿಸಿ ಎಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಮೂಲಕ ವಿವಾದಿತ ಜಾಗಕ್ಕ ಹೋರಾಡುತ್ತಿದ್ದ ಹಿಂದೂಗಳ ನಂಬಿಕೆಗೆ ಐತಿಹಾಸಿಕ ಜಯ ಲಭಿಸಿದೆ. ಆದರೆ, ಬಾಬರಿ ಮಸೀದಿ ಪ್ರತ್ಯೇಕ ಜಾಗವನ್ನು ಕಲ್ಪಿಸಲು ಕೋರ್ಟ್ ಸರಕಾರಕ್ಕೆ ಸೋಚಿಸಿದೆ. ವಿವಾದಿತ ಸ್ಥಳದಲ್ಲಿ ರಾಮನ ಜನನ ಸತ್ಯ ಎಂದಿರುವ ಸುಪ್ರೀಂ ಕೋರ್ಟ್, ಕಾನೂನಾತ್ಮಕ ನಿಯಮ ರೂಪಿಸಿ ಮಂದಿರ ನಿರ್ಮಾಣಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಸ್ಪಷ್ಟವಾಗಿ ನಿರ್ದೇಶಿಸಿದೆ.