Asianet Suvarna News Asianet Suvarna News

'ಅಯೋಧ್ಯೆ ತೀರ್ಪನ್ನು ಹಿಂದೂ-ಮುಸ್ಲಿಮರು ಸೌಹಾರ್ದತೆಯ ಸಂಕೇತವಾಗಿ ಸ್ವೀಕರಿಸಬೇಕು'

ಹಲವು ವರ್ಷಗಳ ವಿವಾದಕ್ಕೆ ಇಂದು ತೆರೆ ಬಿದ್ದಂತಾಗಿದೆ| ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹ| ದೇಶದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಎಲ್ಲರ ಕರ್ತವ್ಯ| ಜನತೆ ಮುಕ್ತ ಮನಸ್ಸಿನಿಂದ ಎಲ್ಲರೂ ತೀರ್ಪನ್ನು ಸ್ವೀಕರಿಸಬೇಕು| ಇದರಿಂದ ದೇಶದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಲಿದೆ| 

Minister Jagadish Shettar Talked About Ayodhya Verdict
Author
Bengaluru, First Published Nov 9, 2019, 1:12 PM IST

ಹುಬ್ಬಳ್ಳಿ(ನ.9): ಅಯೋಧ್ಯೆ ವಿವಾದ ಕುರಿತು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಇದನ್ನು ಹಿಂದೂ-ಮುಸ್ಲಿಮರು ಸೌಹಾರ್ದತೆಯ ಸಂಕೇತವಾಗಿ ಸ್ವೀಕರಿಸಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

ಶನಿವಾರ ನಗರದಲ್ಲಿ ಮಾತನಾಡಿದ ಅವರು, ಹಲವು ವರ್ಷಗಳ ವಿವಾದಕ್ಕೆ ಇಂದು ತೆರೆ ಬಿದ್ದಂತಾಗಿದೆ. ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ದಾರೆ. 

ಅಯೋಧ್ಯೆ ತೀರ್ಪು ಪ್ರಕಟಿಸಲಿರುವ ಐವರು ನ್ಯಾಯಾಧೀಶರಿವರು...

ದೇಶದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ಜನತೆ ಮುಕ್ತ ಮನಸ್ಸಿನಿಂದ ಎಲ್ಲರೂ ತೀರ್ಪನ್ನು ಸ್ವೀಕರಿಸಬೇಕು. ಇದರಿಂದ ದೇಶದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಅಯೋಧ್ಯೆ ತೀರ್ಪು: ಪಂಚ ನ್ಯಾಯಾಧೀಶರಲ್ಲಿ ಒಬ್ಬರು ನಮ್ಮ ಕನ್ನಡಿಗರು!

ದೇಶ ಕಾತರದಿಂದ ಕಾಯುತ್ತಿದ್ದ ಐತಿಹಾಸಿಕ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ತೀರ್ಪನ್ನು ಕೊನೆಗೂ ಸುಪ್ರೀಂಕೋರ್ಟ್ ಪ್ರಕಟಿಸಿದೆ. ವಿವಾದಿತ 2.77 ಎಕರೆ ಜಾಗವನ್ನು ರಾಮಲಲ್ಲಾಗೆ  ವಹಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಮೂಲಕ ವಿವಾದಿತ ಜಾಗಕ್ಕ ಹೋರಾಡುತ್ತಿದ್ದ ಹಿಂದೂಗಳ ನಂಬಿಕೆಗೆ ಐತಿಹಾಸಿಕ ಜಯ ಲಭಿಸಿದೆ. ಆದರೆ, ಬಾಬರಿ ಮಸೀದಿ ಪ್ರತ್ಯೇಕ ಜಾಗವನ್ನು ಕಲ್ಪಿಸಲು ಕೋರ್ಟ್ ಸರಕಾರಕ್ಕೆ ಸೋಚಿಸಿದೆ. ವಿವಾದಿತ ಸ್ಥಳದಲ್ಲಿ ರಾಮನ ಜನನ ಸತ್ಯ ಎಂದಿರುವ ಸುಪ್ರೀಂ ಕೋರ್ಟ್, ಕಾನೂನಾತ್ಮಕ ನಿಯಮ ರೂಪಿಸಿ ಮಂದಿರ ನಿರ್ಮಾಣಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಸ್ಪಷ್ಟವಾಗಿ ನಿರ್ದೇಶಿಸಿದೆ.

ಅಯೋಧ್ಯೆ ತೀರ್ಪು : ರಾಮನ ಹುಟ್ಟು ಸ್ಥಳಕ್ಕಾಗಿ ಹೋರಾಡಿದ ಸಂತರಿವರು

Follow Us:
Download App:
  • android
  • ios