ಹುಬ್ಬಳ್ಳಿ(ನ.15): ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಕೊಡುವ ವಿಚಾರದಲ್ಲಿ ಯಾವುದೇ ಅಸಮಾಧಾನ ಇಲ್ಲ. ಸಣ್ಣಪುಟ್ಟ ವ್ಯತ್ಯಾಸಗಳನ್ನು ಪಕ್ಷದ ವೇದಿಕೆಯಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. 

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಶರತ್ ಬಚ್ಚೆಗೌಡನ ಮನವೊಲಿಸುವ ಪ್ರಶ್ನೆಯೇ ಇಲ್ಲ. ಅದೆಲ್ಲ ಮುಗಿದು ಹೋದ ಅಧ್ಯಾಯವಾಗಿದೆ. ರಾಜು ಕಾಗೆ ಪಕ್ಷ ತೊರೆದಿದ್ದಾರೆ ಅವರ ಬಗ್ಗೆ ನಾನು ಮಾತನಾಡುವುದಿಲ್ಲ.ಉಪ ಚುನಾವಣೆಯಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿದ ಅನರ್ಹ ಶಾಸಕರನ್ನ ಸೋಲಿಸುತ್ತೇವೆ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿಗೆ ತಿರುಗೇಟು ನೀಡಿದ ಸಚಿವ ಶೆಟ್ಟರ್ ಅವರು, ಕುಮಾರಸ್ವಾಮಿ, ದೇವೇಗೌಡರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು.ಅವರ ಹೇಳಿಕೆ, ಟೀಕೆಗಳನ್ನು ಮೆಚ್ಚಿಕೊಂಡ ಸರ್ಕಾರ ನಡೆಸುತ್ತಿಲ್ಲ. ನಮ್ಮ ಶಕ್ತಿ ಮೇಲೆ ಸರ್ಕಾರ ನಡೆಯುತ್ತಿದೆ. ಯಾರನ್ನು ಸೋಲಿಸಬೇಕು ಅನ್ನೊದು ಜನರು ತೀರ್ಮಾನ ಮಾಡ್ತಾರೆ ಎಂದು ತಿಳಿಸಿದ್ದಾರೆ.

ಒಮ್ಮೆ ಯಡಿಯೂರಪ್ಪ ಸರ್ಕಾರ ಸೇಫ್ ಅಂತಾರೆ. ಮತ್ತೊಮ್ಮೆ ಅನರ್ಹ ಶಾಸಕರನ್ನ ಸೋಲಿಸುತ್ತೇವೆ ಅಂತಾರೆ ಅವರಿಗೆ ಏನು ಮಾತನಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ ಅನ್ಸುತ್ತೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ನೆರೆ ಪೀಡಿತ ಪ್ರದೇಶದಲ್ಲಿ ಬಿಜೆಪಿಗೆ ಯಾವುದೇ ಹಿನ್ನಡೆಯಾಗುವುದಿಲ್ಲ. ಸಂತ್ರಸ್ತರಿಗೆ ಯಡಿಯೂರಪ್ಪ ಸರ್ಕಾರ ಸೂಕ್ತ ಪರಿಹಾರ ವಿತರಿಸಲಾಗಿದೆ ಎಂದು ಹೇಳಿದ್ದಾರೆ.