ಅಪಘಾತ: ನೆಲಮಂಗದಲ್ಲಿ ಮೂವರು ಸ್ಥಳದಲ್ಲಿಯೇ ಸಾವು

First Published 23, Feb 2018, 12:18 PM IST
Accident in Nelamangala three die
Highlights

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಲಾರಿ, ಬಸ್, ಬುಲೆರೋ, ಜೀಪಿನ ನಡುವೆ ಈ ಸರಣಿ ಅಪಘಾತದಲ್ಲಿ ಜೀಪಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಬಳಿ ಈ ಘಟನೆ ನಡೆದಿದೆ. 

ಜೀಪಿನಲ್ಲಿ ಇನ್ನೂ ಕೆಲವರಿದ್ದು, ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಈ ಅವಘಡದಿಂಗ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಆಗಿದೆ.

ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ನಡೆದ ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ.

loader