ಅಪಘಾತದಲ್ಲಿ ಪೋಷಕರು, ಮೂರು ಮಕ್ಕಳು ಸಾವು

First Published 22, Mar 2018, 5:25 PM IST
Accident three kids with parents died
Highlights

ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಜಿಲ್ಲೆಯ ವಡಗೂರು ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.

ಕೋಲಾರ: ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಜಿಲ್ಲೆಯ ವಡಗೂರು ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.

ಮೂರು ಶಾಲಾ ಮಕ್ಕಳು, ಪೋಷಕರು ಈ ಘಟನೆಯಲ್ಲಿ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಮೃತರು ರಾಮಸಂದ್ರ ಗ್ರಾಮದ ನಿವಾಸಿಗಳು.

ಜನತಾ ಶಾಲಾ ಮಕ್ಕಳು ಪೋಷಕರ ಜೊತೆ ಬೈಕ್‌ನಲ್ಲಿ ರಸ್ತೆ ದಾಟುವಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

ಘಟನೆ ಖಂಡಿಸಿ ರಾಷ್ಟ್ರೀಯ ಹೆದ್ದಾರಿ 75ರ ವಡಗೂರು ಬಳಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟಿಸಿದ್ದಾರೆ. ಕಾರು ಪುಡಿ ಪುಡಿ ಮಾಡಿ, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

loader