ಕರ್ನಾಟಕ ವಿಧಾನಸಭಾ ಕ್ಷೇತ್ರದ ಚುನಾವಣೆ ತಯಾರಿ ರಾಜ್ಯದಲ್ಲಿ ಬಿರುಸಿನಿಂದ ನಡೆಯುತ್ತಿದೆ.

ಬೆಂಗಳೂರು : ಕರ್ನಾಟಕ ವಿಧಾನಸಭಾ ಕ್ಷೇತ್ರದ ಚುನಾವಣೆ ತಯಾರಿ ರಾಜ್ಯದಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇದೇ ವೇಳೆ ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಇದೀಗ ಬಿಜೆಪಿ ಮುಖಂಡೆ ಮಾಳವಿಕ ಅವಿನಾಶ್ ಅವರೂ ಕೂಡ ತಾವು ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ನಾನು ಸಹ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ನಾನು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಸ್ಪರ್ಧೆಯ ಬಗ್ಗೆ ರಾಜ್ಯ ನಾಯಕರು ತೀರ್ಮಾನಿಸುತ್ತಾರೆ ಎಂದು ಅವರು ಹೇಳಿದ್ದಾರೆ.