ಮಹಾಮಾರಿ ಹೆಚ್1ಎನ್1 ಗೆ ಇಲ್ಲಿ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಇಲ್ಲಿನ ತಿಪ್ಪೇನಹಳ್ಳಿ ಗ್ರಾಮದ ಮುನಿಕೃಷ್ಣ ಎನ್ನುವವರು ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ (ಮಾ.16): ಮಹಾಮಾರಿ ಹೆಚ್1ಎನ್1 ಗೆ ಇಲ್ಲಿ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಇಲ್ಲಿನ ತಿಪ್ಪೇನಹಳ್ಳಿ ಗ್ರಾಮದ ಮುನಿಕೃಷ್ಣ ಎನ್ನುವವರು ಸಾವನ್ನಪ್ಪಿದ್ದಾರೆ.

ಕಳೆದ ವಾರದಿಂದ ಜ್ವರದಿಂದ ಬಳಲುತ್ತಿದ್ದ ಈತನಿಗೆ ರಕ್ತಪರೀಕ್ಷೆ ಮಾಡಿಸಿದಾಗ ಹೆಚ್1ಎನ್1 ಸೋಂಕು ಇರುವುದು ಪತ್ತೆಯಾಗಿದೆ. ಕೂಡಲೇ ಈತನನ್ನು ಬೆಂಗಳೂರಿನ ನಾರಾಯಣ ಸೂಪರ್ ಸ್ಪೇಷಾಲಿಟ್ ಆಸ್ಪತ್ರೆಯಲ್ಲಿ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈ ಹೆಚ್1ಎನ್1 ಮಹಾಮಾರಿಗೆ ಮೂವರು ಬಲಿಯಾದಂತಾಗಿದೆ.