ವೀರಶೈವ ಮಹಾಸಭೆಗೆ ಹೊರಟ್ಟಿ ರಾಜೀನಾಮೆ

Basavaraj Horatti Resign Veerashaiva Mahasabha
Highlights

ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾದಾನಿ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿಅವರು ನೀಡಿದ್ದ ರಾಜೀನಾಮೆಯನ್ನು ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಂಗೀಕರಿಸಿದ್ದಾರೆ.

ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾದಾನಿ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿಅವರು ನೀಡಿದ್ದ ರಾಜೀನಾಮೆಯನ್ನು ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಂಗೀಕರಿಸಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಹೋರಾಡುತ್ತಿರುವ ಬಸವರಾಜ ಹೊರಟ್ಟಿಅವರು ಕಳೆದ ಜ. 25ರಂದು ಮಹಾಸಭಾಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಫೆ. 7ರಂದು ಶಾಮನೂರು ಶಿವಶಂಕರಪ್ಪ ಅವರು ಹೊರಟ್ಟಿಅವರಿಗೆ ಪತ್ರ ಬರೆದು ರಾಜೀನಾಮೆಯನ್ನು ಅಂಗೀಕರಿಸಿರುವುದನ್ನು ತಿಳಿಸಲು ವಿಷಾದಿಸುತ್ತೇನೆ.

ನಿಮ್ಮ ಮುಂದಿನ ಕೆಲಸ ಕಾರ್ಯಗಳಿಗೆ ಬಸವಾದಿ ಶರಣರು ತಮ್ಮ ಕೈ ಹಿಡಿದು ನಡೆಸಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿಕಳೆದ ತಿಂಗಳು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಶ್ವ ಲಿಂಗಾಯತ ಪರಿಷತ್‌ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

loader