ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಸಿಟ್ಟಿಗೆದ್ದ ರೈತ ಸಂಘದ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. 

ಮಂಡ್ಯ (ಮಾ.16): ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಸಿಟ್ಟಿಗೆದ್ದ ರೈತ ಸಂಘದ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. 

ಇದಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಎದುರಿರುವ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ರೈತರು ಪ್ರತಿಭಟನಾ ಜಾಥಾ ನಡೆಸಿದರು. ಈ ಬಾರಿ ರಾಜ್ಯದ ಸರ್ಕಾರ ಮತ್ತು ಕೇಂದ್ರ ಸರ್ಕಾರ ಗಳು ಮಂಡಿಸಿರುವ ಬಜೆಟ್ ರೈತರ ಪರವಾಗಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ಕಣಿವೆ ಒಕ್ಕೂಟದ ಮುಖಂಡರು ಈ ಬಾರಿಯ ರಾಜ್ಯ ಬಜೆಟ್ ನಿರಾಶದಾಯಕವಾಗಿದ್ದು ಮಂಡ್ಯ ಜಿಲ್ಲೆಗೆ ಯಾವುದೇ ಕೊಡುಗೆಗಳನ್ನು ನೀಡಿಲ್ಲ. ರೈತರ ಸಾಲ ಮನ್ನಾ ಮಾಡಿಲ್ಲ. ಮೈಷುಗರ್ ಕಾರ್ಖಾನೆಯ ಪುನರಾರಂಭ ಬಗ್ಗೆ ಬಜೆಟ್ ನಲ್ಲಿ ಏನು ಹೇಳಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು.