ರಾಹುಲ್ ಗಾಂಧಿ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುತ್ತಿದ್ದು, ಈ ವೇಳೆ ರೋಡ್ ಶೋ ನಡೆಸಲು ಚಿಕ್ಕಮಗಳೂರು ಪೊಲೀಸರು ನಿರಾಕರಿಸಿದ್ದಾರೆ.
ಚಿಕ್ಕಮಗಳೂರು : ರಾಹುಲ್ ಗಾಂಧಿ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುತ್ತಿದ್ದು, ಈ ವೇಳೆ ರೋಡ್ ಶೋ ನಡೆಸಲು ಚಿಕ್ಕಮಗಳೂರು ಪೊಲೀಸರು ನಿರಾಕರಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಕ್ಸಲ್ ಪೀಡಿತ ಪ್ರದೇಶವಾಗಿರುವುದರಿಂದ ರೋಡ್ ಶೋ ಮಾಡದಂತೆ ಅನುಮತಿ ನಿರಾಕರಣೆ ಮಾಡಿದ್ದಾರೆ. ಆದರೆ ರಸ್ತೆ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಇದೇ 21 ರಂದು ರಾಹುಲ್ ಗಾಂಧಿ ಶೃಂಗೇರಿಗೆ ಭೇಟಿ ನೀಡುತ್ತಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶೃಂಗೇರಿಯಿಂದ ಚಿಕ್ಕಮಗಳೂರಿನವರೆಗೂ ಕೂಡ ಸೂಕ್ತ ಪರಿಶೀಲನೆ ನಡೆಸಲಾಗಿದೆ.
