ಮಕ್ಕಳ ಮಾರಾಟ ಜಾಲದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮೈಸೂರು ಜಿಲ್ಲಾ ಪೊಲೀಸರು ಇದುವರೆಗೂ ಒಟ್ಟು 13 ಮಕ್ಕಳನ್ನು ರಕ್ಷಿಸಿದ್ದಾರೆ.
ಮೈಸೂರು (ನ.12): ಮಕ್ಕಳ ಮಾರಾಟ ಜಾಲದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮೈಸೂರು ಜಿಲ್ಲಾ ಪೊಲೀಸರು ಇದುವರೆಗೂ ಒಟ್ಟು 13 ಮಕ್ಕಳನ್ನು ರಕ್ಷಿಸಿದ್ದಾರೆ.
ಮಕ್ಕಳ ಮಾರಾಟ ಜಾಲದ ರೂವಾರಿಯಾದ ಫ್ರಾನ್ಸಿಸ್ ಮತ್ತು ಉಷಾ ದಂಪತಿ ಸೇರಿದಂತೆ 7 ಮಂದಿ ಹಾಗೂ ಮಗು ಖರೀದಿಸಿದ್ದ ಮದನ್ ಲಾಲ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರು ನೀಡಿದ
ಮಾಹಿತಿ ಮೇರೆಗೆ ಈ ಹಿಂದೆ 8 ಮಕ್ಕಳನ್ನು ರಕ್ಷಿಸಿದ ಪೊಲೀಸರು, ಈಗ ಮತ್ತೆ 5 ಮಕ್ಕಳನ್ನು ರಕ್ಷಿಸಿದ್ದಾರೆ.
ಆರೋಪಿಗಳು ಕೇರಳಕ್ಕೆ ಮಕ್ಕಳನ್ನು ಮಾರಾಟ ಮಾಡಿರುವ ವಿಚಾರ ತಿಳಿದು ಬಂದಿದ್ದು, ಮಕ್ಕಳ ರಕ್ಷಣೆಗಾಗಿ ವಿಶೇಷ ತಂಡವನ್ನು ಕೇರಳಕ್ಕೆ ಕಳುಹಿಸಲಾಗಿದೆ. ಅಲ್ಲದೆ, ಅಮೆರಿಕಾ ಮತ್ತು ಕೀನ್ಯಾ ದೇಶಕ್ಕೆ ತಲಾ ಒಂದು ಮಗು ಮಾರಾಟವಾಗಿರುವ
ವಿಚಾರ ತಿಳಿದು ಬಂದಿದ್ದು, ಈ ಸಂಬಂಧ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮೈಸೂರು ಎಸ್ಪಿ ರವಿ ಡಿ. ಚನ್ನಣ್ಣನವರ ಕನ್ನಡಪ್ರಭಕ್ಕೆ ತಿಳಿಸಿದರು.
