ಕಾವೇರಿ ತೀರ್ಪಿಗೆ ಅಸಮಾಧಾನ : ರಜನಿಕಾಂತ್ ವಿರುದ್ಧ ಪ್ರತಿಭಟನೆ

Protest Aganst Rajinikanth
Highlights

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್’ನಲ್ಲಿ ರಾಜ್ಯದ ಪರ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ತಮಿಳುನಾಡು ಸ್ಟಾರ್ ನಟ ರಜನಿಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್’ನಲ್ಲಿ ರಾಜ್ಯದ ಪರ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ತಮಿಳುನಾಡು ಸ್ಟಾರ್ ನಟ ರಜನಿಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ನಿಟ್ಟಿನಲ್ಲಿ ರಜನಿ ಹೇಳಿಕೆ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ರಜನಿಕಾಂತ್ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ರಜನಿ ಭಾವಚಿತ್ರ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹೇಳಿಕೆ ಸಂಬಂಧ ಕೂಡಲೇ ರಜನಿಕಾಂತ್ ಕನ್ನಡಿಗರ ಬಳಿ ಕ್ಷಮೆ ಯಾಚಿಸಬೇಕು ಎಂದು ಹೇಳಿದ್ದಾರೆ. ಕಸ್ತೂರಿ  ಕನ್ನಡ ರಾಜ್ಯಾಧ್ಯಕ್ಷ ರಮೇಶ್ ಗೌಡ  ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

 

loader