ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಲಿದೆ ಎಂದೇ ಭಾವಿಸಿದ್ದ ಬಿ.ಎಸ್.ಯಡಿಯೂರಪ್ಪ ಹೇಳಿದ ಸಮಯಕ್ಕೆ ಬ್ರೇಕಿಂಗ್ ನ್ಯೂಸ್ ನೀಡುವಲ್ಲಿ ವಿಫಲವಾಗಿದ್ದು, 'ಅವರು ಹೇಳಿದ ಮಾತನ್ನೇ ಸರಿಯಾದ ಸಮಯಕ್ಕೆ ನಡೆಸಲಾಗದವರು...'ಎಂದು ಕಾಂಗ್ರೆಸ್ ಟೀಕಿಸಿದೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಲಿದೆ ಎಂದೇ ಭಾವಿಸಿದ್ದ ಬಿ.ಎಸ್.ಯಡಿಯೂರಪ್ಪ ಹೇಳಿದ ಸಮಯಕ್ಕೆ ಬ್ರೇಕಿಂಗ್ ನ್ಯೂಸ್ ನೀಡುವಲ್ಲಿ ವಿಫಲವಾಗಿದ್ದು, 'ಅವರು ಹೇಳಿದ ಮಾತನ್ನೇ ಸರಿಯಾದ ಸಮಯಕ್ಕೆ ನಡೆಸಲಾಗದವರು...'ಎಂದು ಕಾಂಗ್ರೆಸ್ ಟೀಕಿಸಿದೆ.

5 ಗಂಟೆಗೆ ಬ್ರೇಕಿಂಗ್ ನ್ಯೂಸ್ ನೀಡುವುದಾಗಿ ಹೇಳಿ, ಯಾವುದೇ ಸುದ್ದಿ ಬ್ರೇಕ್ ಮಾಡದ ಯಡಿಯೂರಪ್ಪ ಅವರ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ನಂತರವೂ ಫೇಸ್‌ಬುಕ್ ಹಾಗೂ ಟ್ವೀಟರಿನಲ್ಲಿ ಯಾವುದೂ ಹೊಸ ವಿಷಯವಲ್ಲದ, ಈಗಾಗಲೇ ಹೇಳಿರುವ ವಿಷಯವನ್ನು ಮತ್ತೆ ಪ್ರಸ್ತಾಪಿಸಿ, ವೀಡಿಯೋ ಪೋಸ್ಟ್ ಮಾಡಿದ್ದಾರೆ. ಇದರಿಂದ ಬಿಜೆಪಿ ಹಾಗೂ ಪಕ್ಷದ ನಾಯಕರು ಸಾಕಷ್ಟು ಟೀಕೆಗಳಿಗೆ ಗುರಿಯಾಗುವಂತಾಗಿದೆ.

Scroll to load tweet…

ಬಿಜೆಪಿ ಸುಳ್ಳಿನ ಪಕ್ಷವೆಂದು ಅನೇಕ ಬಾರಿ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್, ಬ್ರೇಕಿಂಗ್ ನ್ಯೂಸ್ ನೀಡುವುದಾಗಿ ಹೇಳಿದಾಗಲೇ ಈ ಕೆಳಗಿನ ವೀಡಿಯೋವನ್ನು ಪೋಸ್ಟ್ ಮಾಡಿತ್ತು.

Scroll to load tweet…