ಬೆಂಗಳೂರು(ಏ.29): ಲಾಕ್‌ಡೌನ್‌ ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

ಮಂಗಳವಾರ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಅವರು ನಡೆಸಿದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಾಥಮಿಕ ಶಿಕ್ಷಣ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಂಜಾಬ್‌ ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಾಮುಖ್ಯತೆ ಬಗ್ಗೆ ವಿವರಿಸಿದ್ದಾರೆ. ಹೀಗಾಗಿ, ರಾಜ್ಯದಲ್ಲಿಯೂ ವಿದ್ಯಾರ್ಥಿಗಳ ಹಿತಕ್ಕಾಗಿ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಅಂಶವನ್ನು ಪ್ರತಿಪಾದಿಸಿರುವುದಾಗಿ ಹೇಳಿದರು.

ಲಾಕ್‌ಡೌನ್‌ನಿಂದ ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳು: ಉನ್ನತ ಶಿಕ್ಷಣ ಪರೀಕ್ಷೆ ಹೇಗೆ?

ಬಿಸಿಯೂಟ ಸಿಬ್ಬಂದಿ ಗೌರವಧನ ಹೆಚ್ಚಿಸಿ:

ಮಧ್ಯಾಹ್ನ ಉಪಹಾರ ಯೋಜನೆಯಲ್ಲಿ ಕೆಲಸ ಮಾಡುವ ಅಡುಗೆ ಸಹಾಯಕರು ಅತಿ ಕನಿಷ್ಠ ಸಂಭಾವನೆಯಲ್ಲಿ ದುಡಿಯುತ್ತಿರುವುದರಿಂದ ಕೇಂದ್ರದ ಪಾಲನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ. ಕೇಂದ್ರವು ಮೊದಲಿನಿಂದಲೂ ಕೇವಲ 600 ರು. ಮಾತ್ರ ನೀಡುತ್ತಿದೆ. ಆದರೆ, ರಾಜ್ಯ ಸರ್ಕಾರ ತಾನು ನೀಡುತ್ತಿರುವ ಮೊತ್ತವನ್ನು ಸಾಕಷ್ಟುಬಾರಿ ಹೆಚ್ಚಿಸಿದೆ. ಇದೇ ರೀತಿ ಕೇಂದ್ರ ಸರ್ಕಾರವೂ ಹೆಚ್ಚಳ ಮಾಡುವಂತೆ ಮನವಿ ಒತ್ತಾಯಿಸಿದರು.

ಬೇಸಿಗೆ ರಜೆ ಅವಧಿಯಲ್ಲಿಯೂ ಸಹ ಮಧ್ಯಾಹ್ನ ಉಪಹಾರ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿರುವ ಕೇಂದ್ರದ ಕ್ರಮವನ್ನು ಶ್ಲಾಘಿಘಿಸಿದ ಸುರೇಶ್‌ಕುಮಾರ್‌, ಕರ್ನಾಟಕ ಸರ್ಕಾರವು ಈಗಾಗಲೇ ತನ್ನ ಪಾಲಿನ ಅನುದಾನದಲ್ಲಿ ರಜಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಪಡಿತರವನ್ನು ವಿತರಿಸುತ್ತಿರುವ ಅಂಶವನ್ನು ಗಮನಕ್ಕೆ ತಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳೇ ಎಚ್ಚರ, ಶಿಕ್ಷಣ ಇಲಾಖೆಯ ಖಡಕ್ ಸೂಚನೆ ಒಮ್ಮೆ ನೋಡಿ

ಕೋವಿಡ್‌ ಸೃಷ್ಟಿಸಿರುವ ಹೊಸ ಜೀವನ ಶೈಲಿಯನ್ನು ಸಮರ್ಥವಾಗಿ ಎದುರಿಸಲು ರಾಜ್ಯ ಸರ್ಕಾರವು ದೂರದರ್ಶನದ ಚಂದನ ವಾಹಿನಿಯಲ್ಲಿ ಪುನರ್‌ ಮನನ ತರಗತಿಗಳನ್ನು ಹಾಗೂ ಯೂ-ಟ್ಯೂಬ್‌ ಚಾನೆಲ್‌ ನಲ್ಲಿ ಮಕ್ಕಳ ಸಮೃದ್ಧ ಕಲಿಕೆಗೆ ವೇದಿಕೆಗೆ ಸೃಷ್ಟಿಸಿದೆ ಎಂದರು.