ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ

ಬೆಂಗಳೂರು, (ಆ.23): ಐಸಿಎಆರ್ (ಭಾರತೀಯ ಕೃಷಿ ಸಂಶೋಧನಾ ಮಂಡಳಿ) ನಿಯಮದಂತೆ, ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟಪಡಿಸಿರುವ ಸಚಿವರು, ಕೃಷಿಕರ ಕೋಟಾದ ಅಡಿಯಲ್ಲಿ 40% ಸೀಟುಗಳು ಕೃಷಿಕರ ಮಕ್ಕಳಿಗೇ ಮೀಸಲಿರುವುದರಿಂದ, ಈ ಪರೀಕ್ಷೆಯ ರದ್ದತಿಯು ಕೃಷಿಕರ ಮಕ್ಕಳಿಗೆ ಯಾವುದೇ ರೀತಿಯ ಅನ್ಯಾಯ ಉಂಟು ಮಾಡುವುದಿಲ್ಲ ಎಂದು ಖಾತ್ರಿಪಡಿಸುತ್ತೇನೆ. ನೈಜ ಕೃಷಿಕರ ಮಕ್ಕಳು ಮಾತ್ರ ಕೃಷಿಕರ ಕೊಟಾದಲ್ಲಿ ಸೀಟುಗಳನ್ನು ಪಡೆದುಕೊಳ್ಳುವಂತೆ ಮಾಡಲು ಸರ್ವ ನಿಬಂಧನೆಗಳನ್ನು ಸಿದ್ದಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಪ್ರಕೃತಿ ಸಂದೇಶ, ಟ್ರಂಪ್ ವಿರುದ್ಧ ಕೋರ್ಟ್ ಆದೇಶ; ಆ.23ರ ಟಾಪ್ 10 ಸುದ್ದಿ!

Scroll to load tweet…

ಈಗಿನ ಕೊವಿಡ್ ಪರಿಸ್ಥಿತಿಯಲ್ಲಿ ಸರ್ಕಾರವು ರೈತರ ಆರೋಗ್ಯ ಹಾಗೂ ಹಿತರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿದೆ. 15,000 + ಸಾವಿರಾರು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಸ್ವತಃ ಹಾಜರಾಗಬೇಕಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸುವುದು ಕಷ್ಟ ಸಾಧ್ಯ ಎಂದು ಹೇಳಿದ್ದಾರೆ.

ಸಮಾಜದ ಪ್ರತಿ ಸಮುದಾಯವೂ ಈ ರದ್ದತಿಯನ್ನು ತೆರೆದ ಮನದಿಂದ ಸ್ವಾಗತಿಸಿದೆ. ಕೃಷಿ ಸಮಾಜದ ಉದ್ಧಾರಕ್ಕಾಗಿ ತೆಗೆದುಕೊಳ್ಳಲಾದ ನಿರ್ಧಾರಗಳನ್ನು ಸ್ವಾಗತಿಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

Scroll to load tweet…