ಮೈಸೂರು (ಜೂ.21): ಮೈಸೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಪ್ರತಿಕೋದ್ಯಮ ಪದವಿ ಅಥವಾ ಸ್ನಾತ್ನಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ 2019-20ನೇ ಸಾಲಿನ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮ ವಿಷಯದಲ್ಲಿ ಪದವಿ/ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತ್ನಕೋತ್ತರ ಪದವಿ ಪಡೆದಿರಬೇಕು. ಅಭ್ಯರ್ಥಿಗಳು ಪಡೆದ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವವರ ವಯೋಮಿತಿ 40 ವರ್ಷ ಮೀರಿರಬಾರದು. ತರಬೇತಿಯು ತಾತ್ಕಾಲಿಕವಾಗಿರುತ್ತದೆ, ಆಯ್ಕೆಯಾದವರಿಗೆ ಮಾಸಿಕ 15,000/- ರೂ. ಸಂಭಾವನೆ ನೀಡಲಾಗುವುದು.

ಇದನ್ನೂ ಓದಿ | 15 ದಿನದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೆಲ್ಸ ಕೊಟ್ಟ ಕ್ಯಾಂಪಸ್‌ ನೇಮಕಾತಿ

ಆಯ್ಕೆಯಾದವರು ಇಲಾಖೆಯ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 06-07-2019 ಕೊನೆಯ ದಿನವಾಗಿರುತ್ತದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಧನ್ವಂತ್ರಿ ರಸ್ತೆ, ಮೈಸೂರು ದೂರವಾಣಿ ಸಂಖ್ಯೆ: 0821-2423251 ನ್ನು ಸಂಪರ್ಕಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ವಿನೋದ್ ಚಂದ್ರ ಅವರು ತಿಳಿಸಿದ್ದಾರೆ.