ಬೆಂಗಳೂರು[ಮೇ.14]: ಶಿಕ್ಷಕರ ವರ್ಗಾವಣೆಗೆ ಬೇಕಾದ ಸಿದ್ಧತೆಗಳನ್ನು ಶಿಕ್ಷಣ ಇಲಾಖೆ ಮಾಡಿಕೊಳ್ಳುತ್ತಿದ್ದು, ಚುನಾವಣೆ ನೀತಿ ಸಂಹಿತೆ ಪೂರ್ಣಗೊಳ್ಳುವ ಮೊದಲೇ ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಸಾಧ್ಯತೆ ಇದೆ. 2-3 ದಿನಗಳಲ್ಲಿ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಹೊರಬೀಳುವ ನಿರೀಕ್ಷೆಯಿದೆ.

ಈ ಬಗ್ಗೆ ಕನ್ನಡಪ್ರಭದೊಂದಿಗೆ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ

ಎಂ.ಟಿ.ರೇಜು ಅವರು, ಶಿಕ್ಷಕರ ವರ್ಗಾವಣೆಗೆ ಮುಖ್ಯಮಂತ್ರಿ ಕಚೇರಿ ಹಾಗೂ ಚುನಾವಣಾ ಆಯೋಗ ಕೂಡ ಅನುಮತಿ ನೀಡಿದೆ. ವರ್ಗಾವಣೆ ಸಿದ್ಧತೆ ಮತ್ತು ವೇಳಾಪಟ್ಟಿರಚಿಸುವಂತೆ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಅದರಂತೆ, ಇಲಾಖೆ ಅಧಿಕಾರಿಗಳು ಅವಶ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬಹುತೇಕ ಮೇ 20ರೊಳಗೆ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ ತಿಳಿಸಿದ್ದಾರೆ.

ವರ್ಗಾವಣೆಯಲ್ಲಿ ಪತಿ-ಪತ್ನಿ ಪ್ರಕರಣಗಳಲ್ಲಿ ಕಡ್ಡಾಯ ವರ್ಗಾವಣೆ ಮಾಡಲಾಗುತ್ತದೆ. ತೀವ್ರ ತರಹದ ಕಾಯಿಲೆಗಳಿಂದ ಬಳಲುತ್ತಿರುವ ಶಿಕ್ಷಕ- ಶಿಕ್ಷಕಿಯರಿಗೆ ಆದ್ಯತೆ ನೀಡಲಾಗುತ್ತಿದೆ. ಕನಿಷ್ಠ ವರ್ಗಾವಣೆ ನೀತಿ ಅವಧಿಯನ್ನು ಐದು ವರ್ಷದಿಂದ ಮೂರು ವರ್ಷಗಳಿಗೆ ಇಳಿಕೆ ಮಾಡಲಾಗಿದೆ. ಈ ನಿಯಮಗಳ ಕುರಿತು ಈಗಾಗಲೇ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಕದಂತೆ ಇಲಾಖೆಯ ಅಧಿಕಾರಿಗಳು ವರ್ಗಾವಣೆ ನಿಯಮವನ್ನು ರೂಪಿಸಿಕೊಂಡಿದ್ದಾರೆ. ಅದನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ. ನಿಯಮಗಳು ಅಂತಿಮವಾದ ನಂತರ ವೇಳಾಪಟ್ಟಿಅಧಿಸೂಚನೆ ಹೊರಡಿಸಲಾಗುತ್ತದೆ.

ಸರ್ಕಾರಿ ಪ್ರಾಥಮಿಕ ಶಾಲೆಯ 1.64 ಲಕ್ಷ ಶಿಕ್ಷಕರು ಹಾಗೂ ಪ್ರೌಢಶಾಲೆಯ 40 ಸಾವಿರ ಶಿಕ್ಷಕರ ಪೈಕಿ ಈ ಹಿಂದೆ ಸುಮಾರು 70 ಸಾವಿರ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ವಿವಿಧ ಕಾರಣಗಳಿಗೆ ವರ್ಗಾವಣೆ ಪ್ರಕ್ರಿಯೆ ಮುಂದೂಡುತ್ತಲೇ ಇದೆ. ಈ ಬಾರಿಯಾದರೂ ನಡೆಯುತ್ತಾ ಎಂಬುದನ್ನು ಕಾದು ನೋಡ