ನವದೆಹಲಿ, (ಮೇ.08) : ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಷನ್ (ಸಿಬಿಎಸ್‌ಇ) 10ನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷೆಯನ್ನು ಇದೇ ಜುಲೈ 1ರಿಂದ ಜುಲೈ 15ರವೆರೆಗ ನಡೆಸಲು ತೀರ್ಮಾನಿಸಲಾಗಿದೆ.

ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಮಾಹಿತಿ ನೀಡಿದ್ದು, ಲಾಕ್ ಡೌನ್‌ನಿಂದಾಗಿ ಸಿಬಿಎಸ್‌ಇ (CBSE) 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಈ ಪರೀಕ್ಷೆಯನ್ನು ಜುಲೈ 1ರಿಂದ ಜುಲೈ 15ರವರೆಗೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಜೂನ್ ತಿಂಗಳಲ್ಲಿ SSLC ಪರೀಕ್ಷೆ; ಶೀಘ್ರದಲ್ಲೇ ಟೈಂ ಟೇಬಲ್ ಅನೌನ್ಸ್

 ಜುಲೈ 1ರಿಂದ ಜುಲೈ 15ರವರೆಗೆ ಸಿಬಿಎಸ್‌ಇ 10ನೇ ಮತ್ತು 12ನೇ ತರಗತಿ ಪರೀಕ್ಷೆಯನ್ನು ನಿಗದಿಪಡಿಸಲು ಸಿಬಿಎಸ್‌ಇ ಗೆ ಸೂಚಿಸಲಾಗಿದೆ. ಸಿಬಿಎಸ್‌ಇ ಸದ್ಯದಲ್ಲಿಯೇ ಡೀಟೈಲ್ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಿದೆ ಎಂದು ಹೇಳಿದರು. 

ಕೊರೋನಾ ವೈರಸ್‌ ಸೋಂಕು ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಜುಲೈ ತಿಂಗಳ ಮೊದಲ ವಾರದಲ್ಲಿಯೇ ಸಿಬಿಎಸ್‌ಇ ಪರೀಕ್ಷೆಗಳು ನಡೆಯಲಿವೆ.