Asianet Suvarna News Asianet Suvarna News

ಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ: ಹೇಗೆ ಮಾಡೋದು? ಇಲ್ಲಿದೆ ಡಿಟೇಲ್ಸ್!

ಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ| ಎಲ್ಲಿದ್ದೀರೋ ಅಲ್ಲೇ ಪರೀಕ್ಷೆ ಬರೆಯಿರಿ

CET Board Gave A Option To Change Exam Center
Author
Bangalore, First Published May 20, 2020, 7:29 AM IST

ಬೆಂಗಳೂರು(ಮೇ.20): ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ಕೂಡ ವಿದ್ಯಾರ್ಥಿಗಳು ನೆಲೆಸಿರುವ ಸಮೀಪದ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ ಸಿಇಟಿ- 2020 ಯನ್ನು ಜು.30 ಮತ್ತು 31ರಂದು ನಡೆಸಲಾಗುತ್ತಿದೆ. ಕೊರೋನಾದಿಂದ ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ಅಭ್ಯರ್ಥಿಗಳು ನೆಲೆಸಿರುವ ಸಮೀಪವಿರುವ ಸ್ಥಳಗಳಲ್ಲಿಯೇ ಸಿಇಟಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸದಾಗಿ 75 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಸ್ಥಳಗಳನ್ನು ಪ್ರಕಟಿಸಲಾಗಿದೆ. ಪಟ್ಟಿಯನ್ನು ನೋಡಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಬದಲಾಯಿಸಿಕೊಳ್ಳಬಹುದು. ಆದ್ಯತೆ ಮೇರೆಗೆ ಪರೀಕ್ಷಾ ಕೇಂದ್ರ ಬದಲಾಯಿಸಲಾಗುತ್ತದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ, ದಿನಾಂಕ, ವೇಳಾಪಟ್ಟಿ: ಅಂತಿಮ ನಿರ್ಧಾರ ಪ್ರಕಟಿಸಿದ ಸುರೇಶ್ ಕುಮಾರ್

ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸುವವರು ಮೇ 20ರ ಸಂಜೆ 6ರಿಂದ 22ರ ಸಂಜೆ 6 ಗಂಟೆ ವರೆಗೆ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಿಕೊಳ್ಳಬಹುದು. ತಾವು ಈಗಾಗಲೇ ಸಲ್ಲಿಸಿರುವ ಆನ್‌ಲೈನ್‌ ಅರ್ಜಿಯಲ್ಲಿ ಪರೀಕ್ಷಾ ಕೇಂದ್ರವನ್ನು ಬದಲಾವಣೆ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Follow Us:
Download App:
  • android
  • ios