Asianet Suvarna News Asianet Suvarna News

ಸಿಇಟಿ ಪರೀಕ್ಷೆ ಯಾವಾಗ? ಸುಳಿವು ಕೊಟ್ಟ ಸಚಿವ ಸುರೇಶ್ ಕುಮಾರ್

ಕೊರೋನಾ ಲಾಕ್‌ಡೌನ್‌ನಿಂದ ಮುಂದೂಡಲಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ರಾಜ್ಯ ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಇನ್ನು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)  ಪರೀಕ್ಷೆ ಯಾವಾಗ ಎನ್ನುವುದರ ಬಗ್ಗೆ ಸಚಿವ ಸುರೇಶ್ ಕುಮಾರ್ ಸುಳಿವು ಕೊಟ್ಟಿದ್ದಾರೆ.

cet exams will be conduct After SSLC Exam Says Minister Suresh Kumar
Author
Bengaluru, First Published May 8, 2020, 8:21 PM IST

ಬೆಂಗಳೂರು, (ಮೇ.08): ಎಸ್ಎಸ್ಎಲ್‌ಸಿ ಪರೀಕ್ಷೆ ಮುಗಿದ ತಕ್ಷಣವೇ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಗಳನ್ನೂ ನಡೆಸಿ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸುರೇಶ್ ಕುಮಾರ್, ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎನ್ನುವ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಂದಿದ್ದಾರೆ.

10, 12ನೇ ತರಗತಿ ಪರೀಕ್ಷೆಗೆ ದಿನಾಂಕ ಘೋಷಣೆ..!

ಶೀಘ್ರದಲ್ಲೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಲಿದ್ದು, ಹೆಚ್ಚುವರಿ ಶೈಕ್ಷಣಿಕ ಚಟುವಟಿಕೆಗಳು ಇರುವುದಿಲ್ಲ. ಸೀಮಿತ ಅವಧಿಯಲ್ಲಿ ಯಾವ ಯಾವ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎನ್ನುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. 

ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಬೋಧನಾ ಚಟುವಟಿಕೆಗಳನ್ನು ಇಲಾಖೆಯ ಯುಟ್ಯೂಬ್ ವಾಹಿನಿಗೆ ಅಪ್ಲೋಡ್ ಮಾಡಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಇನ್ನು ಬಾಕಿ ಉಳಿದಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಜೂನ್‌ ತಿಂಗಳಲ್ಲಿ ನಡೆಸಲು ಚಿಂತನೆಗಳು ನಡೆದಿವೆ. ಇದಕ್ಕೆ ಸಂಬಂಧಿಸಿದಂತೆ ಆಯಾ ಅಧಿಕಾರಿಗಳಿಗೆ ಸುರೇಶ್ ಕುಮಾರ್ ಸೂಚನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us:
Download App:
  • android
  • ios