ಬೆಂಗಳೂರು (ಜುಲೈ 10): ಇದೇ ಅಕ್ಟೋಬರ್‌ 01 ರಿಂದ ಕಾಲೇಜುಗಳು ತೆರೆಯಲಿದ್ದು, ಎಂದಿನಂತೆ ತರಗತಿಗಳು ನಡೆಯಲಿವೆ ಎಂದು  ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವತ್ಥ ನಾರಾಯಣ್, ಕಾಲೇಜು ಮತ್ತು ವಿಶ್ವವಿದ್ಯಾಲಯದ ಮಟ್ಟದಲ್ಲಿ ಸೆಪ್ಟೆಂಬರ್‌ ಮೊದಲ ತಿಂಗಳಿನಿಂದ ಆನ್‌ಲೈನ್‌ ತರಗತಿಗಳು ನಡೆಯಲಿವೆ. ಆದರೆ, ಅಕ್ಟೋಬರ್‌ 01 ರಿಂದ ಈ ವರ್ಷದ ಶೈಕ್ಷಣಿಕ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದಲ್ಲಿ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ರದ್ದು

2020-21ನೇ ಸಾಲಿನ ಶೈಕ್ಷಣಿಕ ವರ್ಷದ ಮೊದಲ ಸೆಮಿಸ್ಟರ್‌ ಶೈಕ್ಷಣಿಕ ಚಟುವಟಿಕೆಗಳನ್ನು ಸೆಪ್ಟೆಂಬರ್ 01 ರಿಂದ ಆರಂಭಿಸಲು ವಿವಿಗಳಿಗೆ ಸೂಚಿಸಲಾಗಿದೆ. ಆರಂಭದಲ್ಲಿ ಆನ್‌ಲೈನ್‌ ತರಗತಿಗಳನ್ನು ಆರಂಭಿಸಿ, ಅಕ್ಟೋಬರ್ 1 ರಿಂದ ಆಫ್‌ಲೈನ್‌ ತರಗತಿ ಆರಂಭಿಸಲು ಸೂಚಿಸಲಾಗಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳನ್ನು ವಿವಿಗಳು ಮಾಡಿಕೊಳ್ಳಬೇಕು ಎಂದು ಅಶ್ವತ್ಥ ನಾರಾಯಣ ವಿವಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕೊರೋನಾ ಭೀತಿಯಿಂದಾಗಿ ಈ ವರ್ಷ ಶಾಲಾ-ಕಾಲೇಜುಗಳ ಶೈಕ್ಷಣಿಕ ತರಗತಿಗಳು ಆರಂಭವಾಗುವುದು ಅನುಮಾನ ಎನ್ನಲಾಗಿತ್ತು. ಇದೀಗ ರಾಜ್ಯ ಸರ್ಕಾರ ಕಾಲೇಜು ಆರಂಭಿಸಲು ಮುಂದಾಗಿದೆ. 

ಇನ್ನು ಶಾಲೆಗಳನ್ನ ಸಹ ಅಕ್ಟೋಬರ್ ತಿಂಗಳಲ್ಲೇ ಪ್ರಾರಂಭಿಸುವ ಸಾಧ್ಯತೆಗಳಿವೆ ಆದ್ರೆ, ಇದುರವರಗೆ ಯಾವುದೇ ಈ ಬಗ್ಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿಲ್ಲ.