ಬೆಂಗಳೂರು, (ಮೇ.13) : ರಾಜ್ಯದಲ್ಲಿ ಪದವಿ ಕಾಲೇಜುಗಳು ಸೆಪ್ಟಂಬರ್ ಮೊದಲ ವಾರದಲ್ಲಿ ಆರಂಭಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿಎಸ್ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. 

"

ಈ ಕುರಿತಂತೆ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎಸ್.ಅಶ್ವಥ್ ನಾರಾಯಣ್, ಸೆಪ್ಟಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿನ ಪದವಿ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆ ಆರಂಭಗೊಳ್ಳಲಿದೆ ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳೇ ಗಮನಿಸಿ: ಪದವಿ ಪರೀಕ್ಷೆ ನಡೆಯೋದು ಫಿಕ್ಸ್, ಯಾವಾಗ...?

ಅಲ್ಲದೇ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದಂತ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ನಿಗಧಿ ಪಡಿಸಲಾಗುತ್ತದೆ ಎಂದರು.

ಇನ್ನು ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಜೂನ್‌ನಲ್ಲಿ ನಡೆಸಲು ಚಿಂತನೆಗಳು ನಡೆದಿದ್ದು, ಇದಕ್ಕೆ ಸಿದ್ಧತೆಗಳ ಸಹ ನಡೆದವೆ. ಹಾಗೇ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಗಳನ್ನು ಜುಲೈ 30, 31ಕ್ಕೆ ನಿಗಧಿ ಪಡಿಸಲಾಗಿದೆ.

ಒಟ್ಟಿನಲ್ಲಿ ಮುಂದೂಲ್ಪಟ್ಟಿದ್ದ ಪರೀಕ್ಷೆಗಳನ್ನು ಒಂದೊಂದಾಗಿ ನಡೆಸಲು ನಿರ್ಧರಿಸಲಾಗಿದೆ.