Asianet Suvarna News Asianet Suvarna News

ಎಂಜಿನಿಯರಿಂಗ್‌ ಪಠ್ಯದಲ್ಲಿಲ್ಲದ ಪ್ರಶ್ನೆಗೆ ಕೃಪಾಂಕ: ಡಿಸಿಎಂ ಅಶ್ವತ್ಥನಾರಾಯಣ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಉಪ ಕುಲಪತಿ ಪ್ರೊ.ಕರಿಸಿದ್ದಪ್ಪ ಅವರೊಂದಿಗೆ ಚರ್ಚೆ ಮಾಡಿದ್ದೇನೆ: ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ|ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳಿದ್ದರೆ ಅದಕ್ಕೆ ಕೃಪಾಂಕ ಕೊಡಲಾಗುವುದು| ಈ ಬಗ್ಗೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ| 

DCM Ashwathnarayan Grace for the Question that is not in the Engineering Text
Author
Bengaluru, First Published Aug 29, 2020, 1:48 PM IST

ಬೆಂಗಳೂರು(ಆ.29): ಎಂಜಿನಿಯರಿಂಗ್‌ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎನ್ನುವ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು, ಒಂದು ವೇಳೆ ಅಂತಹ ತಪ್ಪುಗಳಾಗಿದ್ದರೆ ಕೃಪಾಂಕ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಉಪ ಕುಲಪತಿ ಪ್ರೊ.ಕರಿಸಿದ್ದಪ್ಪ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಕಾನೂನು ಪರಿಮಿತಿಯಲ್ಲಿ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಹೇಗೆ ಅನುಕೂಲ ಮಾಡಬೇಕೋ ಅದನ್ನು ಕೂಡಲೇ ಮಾಡುವಂತೆ ಸೂಚಿಸಿದ್ದೇನೆ. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳಿದ್ದರೆ ಅದಕ್ಕೆ ಕೃಪಾಂಕ ಕೊಡಲಾಗುವುದು. ಈ ಬಗ್ಗೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ. ಸರ್ಕಾರ ವಿದ್ಯಾರ್ಥಿಗಳ ಹಿತವನ್ನು ಕಡೆಗಣಿಸುವುದಿಲ್ಲ ಎಂದರು.

ಕಾಲೇಜು, ವಿಶ್ವವಿದ್ಯಾಲಯ ಆರಂಭಕ್ಕೆ 2 ರೀತಿಯ ವ್ಯವಸ್ಥೆ

ಅಂತಿಮ ವರ್ಷದ ಎಂಜಿನಿಯರಿಂಗ್‌ ಪರೀಕ್ಷೆ ಉತ್ತಮವಾಗಿ ನಡೆದಿದೆ. ಶೇ.99 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಕಳೆದ ವರ್ಷಗಳಲ್ಲಿ ನಡೆದ ಪರೀಕ್ಷೆಗಳಿಗೆ ಹೋಲಿಸಿದರೆ ಈ ವರ್ಷ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದು ಖಂಡಿತಾ ಉತ್ತಮ ಪ್ರಮಾಣ ಮತ್ತು ಬೆಳವಣಿಗೆ. ಇನ್ನು ಈ ಪರೀಕ್ಷೆಗೆ ಯಾರು ಹಾಜರಾಗಿಲ್ಲ, ಅಂಥವರಿಗೆ ಕ್ಯಾರಿಓವರ್‌ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಮುಂದಿನ ಸೆಮಿಸ್ಟರ್‌ ವೇಳೆಗೆ ಅವರು ಪರೀಕ್ಷೆ ಬರೆಯಬಹುದು ಎಂದು ಇದೇ ವೇಳೆ ಸಚಿವರು ತಿಳಿಸಿದರು.
 

Follow Us:
Download App:
  • android
  • ios