Asianet Suvarna News Asianet Suvarna News

'ಪರೀಕ್ಷೆಯಿಲ್ಲದೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿ!'

ಪರೀಕ್ಷೆಯಿಲ್ಲದೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿ!| ಧಾರವಾಡದ ಶಿಕ್ಷಣ ಅಧಿಕಾರಿಯಿಂದ ಸರ್ಕಾರಕ್ಕೆ ಮನವಿ

Dharwad Education Officers Requests State Govt To Promote SSLC Students Without Examination
Author
Bangalore, First Published Apr 20, 2020, 7:54 AM IST

ಬೆಂಗಳೂರು(ಏ.20): ಕೊರೊನಾ ವೈರಸ್‌ ಸೋಂಕು ಹೆಚ್ಚಾಗುತ್ತಿರುವುದರಿಂದ 2020ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬದಲಾಗಿ ವಿದ್ಯಾರ್ಥಿಗಳನ್ನು ಉತ್ತೀರ್ಣರನ್ನಾಗಿ ಘೋಷಣೆ ಮಾಡುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಎಸ್‌.ಹಿರೇಮಠ, ಈ ಸಂಬಂಧ ಪರಿಶೀಲನೆ ನಡೆಸಲು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಮನವಿ ಮಾಡಿದ್ದಾರೆ.

ಕೊರೊನಾದಿಂದ ಸದ್ಯಕ್ಕೆ ರಾಜ್ಯದ ಪರಿಸ್ಥಿತಿ ಸುಧಾರಿಸುವುದು ಕಷ್ಟವಾಗಿರುವುದರಿಂದ ಪರೀಕ್ಷೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಈಗಾಗಲೇ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಈ ಹಿಂದಿನ ಪರೀಕ್ಷೆಯ ಆಧಾರದ ಮೇಲೆ ಉತ್ತೀರ್ಣ ಮಾಡಿರುವ ರೀತಿಯಲ್ಲೇ ಎಸ್ಸೆಸ್ಸೆಲ್ಸಿ ಮಕ್ಕಳನ್ನು ಮುಂದಿನ ತರಗತಿಗೆ ಕಳುಹಿಸುವುದು ಉತ್ತಮ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ ಹೇಗೆ?: ಇಂದು ಸಂಪುಟ ನಿರ್ಧಾರ

ಧಾರವಾಡ ವ್ಯಾಪ್ತಿಯಲ್ಲಿ 700ಕ್ಕಿಂತ ಹೆಚ್ಚಿಗೆ ಪರೀಕ್ಷಾ ಕೇಂದ್ರಗಳಿದ್ದು, 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಂದು ಕೇಂದ್ರದಲ್ಲಿ 350-400 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟ. ಈ ಹಿನ್ನೆಲೆಯಲ್ಲಿ ಈ ಹಿಂದೆ ನಡೆಸಿದ ಪರೀಕ್ಷೆಯ ಆಧಾರದ ಮೇಲೆ ಗ್ರೇಡಿಂಗ್‌ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಕೋರಿದ್ದಾರೆ.

ನೋಟಿಸ್‌ ಜಾರಿ: ಆಯುಕ್ತರ ಪ್ರಸ್ತಾವನೆ ಕುರಿತು ಅಚ್ಚರಿ ವ್ಯಕ್ತಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌, ಆಯುಕ್ತರಿಗೆ ಕಾರಣ ಕೇಳಿ ಶೋಕಾಸ್‌ ನೋಟಿಸ್‌ ಜಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow Us:
Download App:
  • android
  • ios