ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿ ಘೋಷಿಸಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ ಎಂದು ಮಾಜಿ ಸಿಎಂ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು, (ಮೇ.22): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್​ಲೈನ್​ ತರಗತಿ ಮೂಲಕ ಮೇ 30ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಆತುರದ ಕ್ರಮ ಎಂದು ಮಾಜಿ ಸಿಎಂ ಎಚ್ ​.ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್ ತರಗತಿ ಬಗ್ಗೆ ಸಾಮಾಜಿಕ ಜಾಲತಾಣಗಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದಿದ್ದಾರೆ.

ವಿವಿ, ಕಾಲೇಜು ಏಕರೂಪ ಶಿಕ್ಷಣಕ್ಕೆ ತಜ್ಞರ ವಿರೋಧ

ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆಯಿಂದ ಆನ್​ಲೈನ್​​ ತರಗತಿ ಪಠ್ಯ ಆಲಿಸುವುದು ಕಷ್ಟ. ಪ್ರತೀ ವಿದ್ಯಾರ್ಥಿಯೂ ಕೂಡ ಆನ್​ಲೈನ್ ಮುಖಾಂತರ ಪರಿಪೂರ್ಣವಾಗಿ ಕಲಿಯಲು ಸಾಧ್ಯವಿಲ್ಲ ಎಂದು ಸರ್ಕಾರದ ಆನ್​ಲೈನ್​ ತರಗತಿ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Scroll to load tweet…

ಬಹುತೇಕ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳು ಆನ್​ಲೈನ್ ತರಗತಿ ಆರಂಭಿಸಿವೆ. ಇದರಿಂದ ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೊರೋನಾ ಸಂಕಷ್ಟ ಸಮಯದಲ್ಲಿ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಆಗ್ರಹಿಸುತ್ತೇನೆ ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

Scroll to load tweet…