ಬೆಂಗಳೂರು, (ಆ.19): ನಾಳೆ ಅಂದ್ರೆ  ಆ.20ಕ್ಕೆ ಪ್ರಕಟವಾಗಬೇಕಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ತಾಂತ್ರಿಕ ಕಾರಣಗಳಿಂದಾಗಿ ಒಂದು ದಿನ ಮುಂದೂಡಲಾಗಿದೆ.

ತಾಂತ್ರಿಕ ಕಾರಣಗಳಿಂದಾಗಿ‌ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು  ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಆ.20ಕ್ಕೆ ಸಿಇಟಿ ರಿಸಲ್ಟ್, ಇಂಜಿನಿಯರಿಂಗ್ ಶುಲ್ಕ ಹೆಚ್ಚಳವಿಲ್ಲ ಎಂದ ಡಿಸಿಎಂ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಅಂದು (ಶುಕ್ರವಾರ)  ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು 
 ಸಾರ್ವಜನಿಕರಿಗೆ ಲಭ್ಯವಾಗುವ ಹಾಗೆ ಮಾಡಲಿದೆ ಎಂದು ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಆಗಸ್ಟ್ 21 ಬೆಳಿಗ್ಗೆ 11ಕ್ಕೆ ಪತ್ರಿಕಾಗೋಷ್ಠಿ ಮೂಲಕ ಅಶ್ವತ್ಥನಾರಾಯಣ ಅವರು ಸಿಇಟಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಿಲಿದ್ದು, http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.