ಬೆಂಗಳೂರು, (ಮೇ.26): ಯುಜಿಸಿ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳನ್ನು ಜೂನ್ 15ರೊಳಗೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದ್ದು, ಈ ಬಾರಿ ಬೇಸಿಗೆ ರಜೆಯನ್ನು ಮೊಟಕುಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿಎಸ್  ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು (ಮಂಗಳವಾರ) ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ನ್ಯಾಕ್ ಮೌಲ್ಯಮಾಪನ, ಶೈಕ್ಷಣಿಕ ವರ್ಷದ ವೇಳಾಪಟ್ಟಿ, ಪರೀಕ್ಷಾ ಸಿದ್ಧತೆ ಮುಂತಾದ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದೆವು. ಇಲಾಖೆಯ ಹೊಸ ಯೋಜನೆಗಳ ಬಗ್ಗೆಯೂ ಮಾಹಿತಿ‌ ನೀಡಲಾಯಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ: 15 ಸಂಘ​ಟನೆಗಳಿಂದ ಒತ್ತಡ!

ಆನ್ ಲೈನ್ ತರಗತಿಗಳಿಗೆ ಹೆಚ್ಚಿನ ಒತ್ತು ಕೊಡಿ ಉನ್ನತ ಶಿಕ್ಷಣ ಇಲಾಖೆಯ ಸಭೆ ಯಲ್ಲಿ ಸೂಚನೆ ನೀಡಿದ ಸಿಎಂ, ಕೋವಿಡ್ 19 ನಿಂದ ಆನ್ ಲೈನ್ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಯಾವುದೇ ಸಮಸ್ಯೆಯಾಗದಂತೆ ಎಚ್ಚರ ವಹಿಸಿ ಎಂದು ಸೂಚಿಸಿದರು.

ಆನ್ ಲೈನ್ ತರಗತಿಗಳಿಗೆ ಸಾಮಾನ್ಯ ತರಗತಿಗಳಿಗೆ ಹೋಲಿಸಿದರೆ, ಕಡಿಮೆ ವೆಚ್ಚದ್ದಾಗಿದೆ. ಈ ವ್ಯವಸ್ಥೆಯನ್ನು ಪಿ.ಯು ಮಟ್ಟದಿಂದಲೇ ಪ್ರಾರಂಭಿಸಿ. ಈ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

ಲಾಕಡೌನ್ ಪೂರ್ವದಲ್ಲಿ ಶೇ 79 ರಷ್ಟು ಪಠ್ಯಕ್ರಮ ಪೂರ್ಣಗೊಂಡಿದ್ದು, ಮೇ 31ರೊಳಗೆ ಶೇಕಡಾ 21ರಷ್ಟು ಪಠ್ಯಕ್ರಮಗಳನ್ನು ಆನ್‍ಲೈನ್ ಬೋಧನೆ ಮೂಲಕ ಪೂರ್ಣಗೊಳಿಸಲಾಗುತ್ತೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಅಧಿಕಾರಿಗಳ ಅಭಿಪ್ರಾಯ

ವೆಬ್‍ಎಕ್ಸ್, ಸ್ಕೈಪ್ ಹಾಗೂ ಇತರೆ ಆನ್‍ಲೈನ್ ಪ್ಲಾಟ್ ಫಾರಂ ಮೂಲಕ 30 ಸಾವಿರ ಆನ್‍ಲೈನ್ ತರಗತಿಗಳನ್ನು ನಡೆಸಲಾಗಿದೆ. ವಾಟ್ಸಪ್  ಮತ್ತು ಟೆಲಿಗ್ರಾಂ ಮೂಲಕ ಶೇಕಡಾ 85 ರಷ್ಟು ವಿದ್ಯಾಥಿಗಳಿಗೆ ಇ-ನೋಟ್ಸ್, ಪಿಪಿಟಿ ಹಾಗೂ ಹಳೆಯ ಪ್ರಶ್ನೆ ಪತ್ರಿಕೆಗಳ ವಿತರಣೆ ಮಾಡಲಾಗಿದೆ. 

ಜ್ಞಾನನಿಧಿ ಯು-ಟ್ಯೂಬ್ ಚಾನೆಲ್ ಮೂಲಕ 65 ವಿಷಯಗಳ 7074 ಬೋಧನಾ ವಿಡಿಯೋ ಅಪ್‍ಲೋಡ್ ಮಾಡಲಾಗಿದೆ. 5 ಲಕ್ಷ ವೀಕ್ಷಣೆಯಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ವಿವರಿಸಿದರು.

ಬಾಬಾ ಸಾಹೇಬ್ ಸ್ಕೂಲ್ ಆಫ್ ಎಕಾಮಿಕ್ಸ್ ಕಟ್ಟಡ ಪೂರ್ಣ
ಬೆಂಗಳೂರಿನ ಬಾಬಾ ಸಾಹೇಬ್ ಸ್ಕೂಲ್ ಆಫ್ ಎಕಾಮಿಕ್ಸ್ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಇದರ ಉದ್ಘಾಟನೆ ಲಾಕ್ ಡೌನ್ ನಂತರದ ದಿನಗಳಲ್ಲಿ ನಡೆಯಲಿದೆ. ಇದರ ಉದ್ಘಾಟನೆಗೆ ಪ್ರಧಾನಮಂತ್ರಿಗಳನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ತಿಳಿಸಿದರು.