ಬೆಂಗಳೂರು, (ಜುಲೈ.06):  ಇದೇ ಜುಲೈ 15ರಿಂದ ಆರಂಭಗೊಂಡು ಆಗಸ್ಟ್ 5ಕ್ಕೆ ಮುಕ್ತಾಯಗೊಳ್ಳಬೇಕಿದ್ದ  ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

 ಈ ಕುರಿತು ಇಂದು (ಸೋಮವಾರ) ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್: ಕಲ್ಯಾಣ ಕರ್ನಾಟಕದ ಎಲ್ಲಾ ನೇಮಕಾತಿ ಭರ್ತಿಗೆ ತಡೆ

 ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ  ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳು ಮತ್ತು ಕೋಚಿಂಗ್ ಸೆಂಟರ್, ಇನ್ಸಿಟ್ಯೂಷನ್ ಗಳನ್ನು ಜುಲೈ 31ರವರೆಗೆ ಮುಚ್ಚಲು ರಾಜ್ಯ ಸರ್ಕಾರ ಆದೇಶಿಸಿದೆ. 

ಇದರಿಂದ ದಿನಾಂಕ 15-07-2020ರಿಂದ ದಿನಾಂಕ 05-08-2020ರವರೆಗೆ ನಿಗದಿಪಡಿಸಲಾಗಿದ್ದ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.