ಬೆಂಗಳೂರು, (ಮೇ.16): ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವುದರಿಂದ ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ಯಾವಾಗ ಪ್ರಾರಂಭವಾಗುತ್ತದೆ ಎಂಬ ಗೊಂದಲ ಇನ್ನೂ ಮುಂದುವರೆದಿದೆ.

ಇದರ ನಡುವೆ ಎರಡು ಪಾಳಿಯಲ್ಲಿ ತರಗತಿಗಳು ಪ್ರಾರಂಭವಾಗುತ್ತವೆ ಎನ್ನುವ ಸುದ್ದಿ ಹಬ್ಬಿದೆ. ಇದೀಗ ಶಿಕ್ಷಣ ಇಲಾಖೆ ಶಾಲೆಗಳು ಆರಂಭವಾಗುವ ಕುರಿತು ಬಂದಿರುವ ವರದಿಗಳಿಗೆ ಸಮಜಾಯಿಷಿ ನೀಡಿದೆ.

 ಸಾಮಾಜಿಕ ಅಂತರ ಕಾಪಾಡುವ ಕುರಿತು ಪಾಳಿ ಪದ್ಧತಿಯಲ್ಲಿ ತರಗತಿಗಳನ್ನು ನಡೆಸುವ ಸಂಬಂಧ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಗಳು ಆಗಿವೆ. ಆದ್ರೆ, ಇದೇ ಅಧಿಕೃತವಲ್ಲ ಎಂದು ಸ್ಪಷ್ಟಪಡಿಸಿದೆ.

ಮಕ್ಕಳನ್ನ ಅಡ್ಮಿಷನ್‌ ಮಾಡಿಕೊಳ್ಳಲು ಶಾಲೆಗಳಿಗೆ ಅನುಮತಿ: ತರಗತಿ ಪ್ರಾರಂಭ ಯಾವಾಗ..?

  2020-21ನೇ ಸಾಲಿನ ಶೈಕ್ಷಣಿಕ ವರ್ಷ ಯಾವಾಗ ಪ್ರಾರಂಭಿಸಬೇಂದು ನಿರಂತರವಾಗಿ ಅಧಿಕಾರಿಗಳ ಸಭೆ ಮೇಲೆ ಸಭೆ ನಡೆಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್‌ ಟ್ವೀಟ್ ಮಾಡಿದ್ದು, ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದ. ಇದರಿಂದ ತರಾತುರಿಯಲ್ಲಿ ಶಾಲೆಗಳನ್ನು ತೆರೆಯುವುದಿಲ್ಲ. ಶಾಲೆ ಆರಂಭದ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳ ಅಂತರ ಕಾಯ್ದುಕೊಳ್ಳಲು ಪಾಳಿ ಪದ್ಧತಿಯಲ್ಲಿ  ಅಂದ್ರೆ, ಮೊದಲನೇ ಪಾಳಿ ಸಮಯ ಬೆಳಿಗ್ಗೆ 7.50ರಿಂದ ಮಧ್ಯಾಹ್ನ 12.20ರವರೆಗೆ ಮೊದಲ ಬ್ಯಾಚ್. ನಂತರ ಎರಡನೇ ಪಾಳಿಯನ್ನು ಮಧ್ಯಾಹ್ನ 12.10ರಿಂದ ಸಂಜೆ 5.00 ಗಂಟೆಯವರೆಗೆ ತರಗತಿ ನಡೆಸಲು ನಿರ್ಧಿರಿಸಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಆದ್ರೆ, ಈ ತರಹದ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ಗೊಂದಲಕ್ಕೊಳಗಾಗಬಾರದು.