ಬೆಂಗಳೂರು : ಕರ್ನಾಟಕ ಸರ್ಕಾರ ಎಸ್ ಸಿ ವಿದ್ಯಾರ್ಥಿಗಳಿಗೆ ಭರ್ಜರಿ  ಗಿಫ್ಟ್ ನೀಡಿದೆ.  ವಿದೇಶಿ ವ್ಯಾಸಂಗಕ್ಕೆ ತೆರಳುವ ಪರಿಶಿಷ್ಟ ಜಾರಿ ವಿದ್ಯಾರ್ಥಿಗಳಿಗಾಗಿ ಸಿಎಂ ಕುಮಾರಸ್ವಾಮಿ ಸರ್ಕಾರ ನೂತನ ಯೋಜನೆಯೊಂದನ್ನು  ಜಾರಿ ಮಾಡುತ್ತದೆ. 

ವ್ಯಾಸಂಗಕ್ಕೆ ಧನಸಹಾಯ ಮಾಡುವ ‘ಪ್ರಬುದ್ಧ’ ಯೋಜನೆಯನ್ನು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಉದ್ಘಾಟಿಸಿದ್ದಾರೆ.  ಈ ಯೊಜನೆಯ ಅಡಿಯಲ್ಲಿ ವರ್ಷಕ್ಕೆ ನಾಲ್ಕು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಜನೆಯ ಲಾಭ ಪಡೆಯಲಿದ್ದಾರೆ. 

'ಪ್ರಬುದ್ಧ' ಯೋಜನೆ ಅಡಿ ವಿದ್ಯಾರ್ಥಿಗಳ ವ್ಯಾಸಂಗ ಶುಲ್ಕ, ವಾಸದ ವೆಚ್ಚ, ಹಾಗೂ ವಿಮಾನಯಾನದ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ. ವಾರ್ಷಿಕ ಎಂಟು ಲಕ್ಷದ ವರೆಗೆ ಆದಾಯ ಇರುವ ಕುಟುಂಬಗಳ ವಿದ್ಯಾರ್ಥಿಗಳ ಸಂಪೂರ್ಣ ವೆಚ್ಚವನ್ನ ಸರ್ಕಾರ ನೀಡಲಿದೆ.  

ಸಮಾಜ ಕಲ್ಯಾಣ ಇಲಾಖೆ ನಡೆಸಲಾಗುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದರ ಲಾಭ ಲಭಿಸಲಿದ್ದು,  ವಿದ್ಯಾರ್ಥಿಗಳು ಆನ್ ಲೈನ್ ಮೂಲಕಅರ್ಜಿ ಸಲ್ಲಿಸಲು ಅವಕಾಶ.

www.a color ship website address.gov.in  ವೆಬ್ ಸೈಟ್ ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 15ರ ಬಳಿಕ ಪ್ರಬುದ್ಧ ಯೋಜನೆಯ ವೆಬ್ ಸೈಟ್ ಕಾರ್ಯನಿರ್ವಹಿಸಲಿದೆ.