Asianet Suvarna News Asianet Suvarna News

ಗುಡ್ ನ್ಯೂಸ್: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡಿದ್ದವರಿಗೆ ಮತ್ತೊಂದು ಚಾನ್ಸ್..!

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾವಕಾಶ ಕಲ್ಪಿಸುವ 'ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ (ನೀಟ್‌)' ಗೊಂದಲದ ಗೂಡಾಗಿ ಪರಿವರ್ತನೆಗೊಂಡ ಪರೀಕ್ಷೆಯಿಂದಲೇ ವಂಚಿತರಾಗಿದ್ದ ಕರ್ನಾಟಕದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.

Karnataka students who missed NEET Exam due to train delay to get another chance
Author
Bengaluru, First Published May 6, 2019, 6:12 PM IST

ಬೆಂಗಳೂರು, [ಮೇ.06]: ಹಲವು ಗೊಂದಲಗಳಿಂದ ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಮತ್ತೆ ಅವಕಾಶ ನೀಡಿದೆ.

ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಆದ್ರೆ ಪರೀಕ್ಷೆ ಯಾವಾಗ ನಡೆಯಲಿದೆ ಎನ್ನುವುದನ್ನು ಇನ್ನು ಮಾಹಿತಿ ನೀಡಿಲ್ಲ.

ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳು ವಂಚಿತ:ಮತ್ತೆ ಅವಕಾಶಕ್ಕೆ ಮೋದಿಗೆ ಸಿಎಂ ಮನವಿ, ಸಿದ್ದು ಗುಟುರು

ಪರೀಕ್ಷಾ ಕೇಂದ್ರದ ಬದಲಾವಣೆ ಹಾಗೂ ಬೆಂಗಳೂರಿಗೆ ಹಂಪಿ ಎಕ್ಸ್‌ಪ್ರೆಸ್‌ ರೈಲು ವಿಳಂಬವಾಗಿ ಆಗಮಿಸಿದ ಪರಿಣಾಮ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಅವಕಾಶವೇ ತಪ್ಪಿ ಹೋಗಿತ್ತು.

ರೈಲು ವಿಳಂಬದಿಂದಾಗಿ ನೀಟ್ ಪರೀಕ್ಷೆ ಬರೆಯಲು ಆಗಿರಲಿಲ್ಲ. ಇದ್ರಿಂದ ವಿದ್ಯಾರ್ಥಿಗಳಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದ್ರಿಂದ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶ ಎಂದು ಸಿಎಂ ಕುಮಾರಸ್ವಾಮಿ ಹಾಗು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ಅಷ್ಟೇ ಅಲ್ಲದೇ ಈ ಬಗ್ಗೆ ಡಿ.ವಿ.ಸದಾನಂದ ಗೌಡ ಅವರೂ ಸಹ ಪ್ರಕಾಶ್ ಜಾವ್ಡೇಕರ್ ಅವರಿಗೆ ಪತ್ರ ಬರೆದಿದ್ದರು. ಇದರ ಪರಿಣಾಮ ಪ್ರಕಾಶ್ ಜಾವ್ಡೇಕರ್ ಅವರು ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದು ವಿದ್ಯಾರ್ಥಿಗಳಿಗೆ ಸಂತಸ ತಂದಿದೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಧನ್ಯವಾದ ಹೇಳಿದ್ದಾರೆ.

Follow Us:
Download App:
  • android
  • ios