ಸಾರಿಗೆ ಇಲಾಖೆ ಖಾಲಿ ಹುದ್ದೆಗಳ ಭರ್ತಿ ಶೀಘ್ರ, ಪರೀಕ್ಷೆ ಹೇಗಿರುತ್ತದೆ?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 27, Dec 2018, 9:48 PM IST
karnataka transport department recruitment details
Highlights

ಸಾರಿಗೆ ಇಲಾಖೆ ತನ್ನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಸ್ವತಃ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ.

ಬೆಂಗಳೂರು[ಡಿ.27]  ಒಬ್ಬ ಅಧಿಕಾರಿ ಎರಡರಿಂದ ಮೂರು ಆರ್‌ಟಿಓ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ಖಾಲಿಯಿರುವ 271 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿ,  ನಾನು ಇಲಾಖೆ ವಹಿಸಿಕೊಂಡ ಮೇಲೆ 2.5 ಸಾವಿರ  ಹುದ್ದೆ ಭರ್ತಿ ಆಗಿದೆ. ಬಸ್ ಕಂಡಕ್ಟರ್, ಡ್ರೈವರ್ ಮೆಕ್ಯಾನಿಕಲ್ ಎಂಬ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನು 271 ಆರ್‌ಟಿಒ ಅಧಿಕಾರಿ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದರು.

BSF ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಬ್ಬ ಆರ್ ಟಿ ಓ ಎರಡು ಮೂರು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅತಿ ಶೀಘ್ರ ಕೆಪಿಎಸ್ಸಿ ಮೂಲಕ ಭರ್ತಿ ಮಾಡಲಾಗುವುದು. ಸೆಲೆಕ್ಷನ್ ಬಳಿಕ ಒಂದು ವರ್ಷ ತರಬೇತಿ ನೀಡಲಾಗುವುದು‌ ಎಂದು ತಿಳಿಸಿದರು. ತರಬೇತಿ ನಂತರ ಒಂದು ಪರೀಕ್ಷೆ ನಡೆಸಲಾಗುತ್ತೆ. ಇಲ್ಲಿ ಉತ್ತೀರ್ಣರಾದವರಿಗೆ ನೇಮಕಾತಿಗೆ ಅವಕಾಶ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

loader