ಬೆಂಗಳೂರು, (ಜೂ.12): ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಕೆ.ಎಸ್‌.ಆರ್‌.ಟಿ.ಬಸ್‌ ಬಸ್‌ನಲ್ಲಿ‌ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದು, ಈ ಬಗ್ಗೆ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.

ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ವಿದ್ಯಾರ್ಥಿಗಳು ಹೋಗುವಾಗ ಹಾಗೂ ಬರುವಾಗ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.

SSLC ಪರೀಕ್ಷೆ ನಡೆಸ್ಬೇಕಾ? ಬೇಡ್ವಾ? ಅಂತಿಮ ನಿರ್ಧಾರ ಪ್ರಕಟಿಸಿದ ರಾಜ್ಯ ಸರ್ಕಾರ

ಜೂ.25ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದೆ. ಹಾಗೂ ಜೂ.18ರಂದು ದ್ವಿತೀಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಹೊರಡಿಸಿರುವ ಸುತ್ತೊಲೆಯಲ್ಲಿ ತಿಳಿಸಲಾಗಿದೆ.

ಈ ಸಂಬಂಧ ನಿಗಮ ಎಲ್ಲಾ ಚಾಲಕ-ನಿರ್ವಾಹಕರಿಗೆ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಅಲ್ಲದೆ ಬಸ್ ತೆರಳುವ ಮಾರ್ಗದಲ್ಲಿ ಪರೀಕ್ಷೆ ಕೇಂದ್ರಗಳು ಇದ್ದಲ್ಲಿ ವಿದ್ಯಾರ್ಥಿಗಳು ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆಗೂ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಇದೇ ಜೂನ್ 25 ಜುಲೈ 3ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಮತ್ತೊಂದೆಡೆ ಪರೀಕ್ಷೆ ನಡೆಸದಂತೆ ವಿರೋಧಗಳು ಸಹ ವ್ಯಕ್ತವಾಗುತ್ತಿವೆ. ಆದರೂ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಮುಂದಾಗಿದೆ.

News In 100 Seconds | ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"