ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೋಷಕರಿಗೆ ಸುರೇಶ್​ ಕುಮಾರ್​ ಮಹತ್ವದ ಸಂದೇಶ

ಎಸ್​​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವುದರ ಹಿನ್ನೆಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರಿಗೆ ಮಹತ್ವದ ಸಂದೇಶ ನೀಡಿದ್ದಾರೆ.

Minister suresh-kumar important message to SSLC Students parents about Result

ಬೆಂಗಳೂರು, (ಆ.10):  ಎಸ್​​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಇನ್ನೇನು ಕೆಲವೇ ನಿಮಿಷಗಳು ಬಾಕಿ ಇವೆ. ಇ ಹಿನ್ನೆಲೆ ವಿದ್ಯಾರ್ಥಿಗಳ ಪೋಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರಿಗೆ ಮಹತ್ವದ ಸಂದೇಶ ನೀಡಿದ್ದಾರೆ.

ಈ ಕುರಿತು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಅವರು, ಇಂದು (ಸೋಮವಾರ) ಮಧ್ಯಾಹ್ನ 3:30ರ ಹೊತ್ತಿಗೆ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುತ್ತದೆ. ತಮ್ಮ ಮೊಬೈಲಿಗೆ ಫಲಿತಾಂಶ ಬರಲಿದೆ. ಕೊರೋನಾ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂಬುದು ತಮಗೆ ತಿಳಿದಿರಲಿ. ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ. ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ ಎಂದಿದ್ದಾರೆ.

ಎಸ್‌ಎಸ್‌ಎಲ್‌ಸಿ SC/STವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇನ್ನು ಅವರು ಯಾವ ಕೋರ್ಸನ್ನು ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ. ಮುಂದೆ ಚೆನ್ನಾಗಿ ಓದಲು ಹೇಳಿ. ಹಾಗೂ ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅವಕಾಶವಿರುತ್ತದೆ. ಮಗು ಮನೆಯ ಬೆಳಕು ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಸುರೇಶ್​ ಕುಮಾರ್ ಹೇಳಿದ್ದಾರೆ.

Latest Videos
Follow Us:
Download App:
  • android
  • ios