ಮಂಡ್ಯ, (ಆ.13) : ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಾಲೆಗಳನ್ನು ಕೊರೋನಾ ಭೀತಿಯ ನಡುವೆಯೂ ಆರಂಭಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂಬುದಾಗಿ ಹೇಳುತ್ತಿದ್ದಾರೆ. ಆದ್ರೇ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ ನಿಂದ ರಾಜ್ಯದಲ್ಲಿ ಶಾಲೆಗಳು ಪ್ರಾರಂಭಿಸಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇಂದು (ಗುರುವಾರ) ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ನನಗೆ ಬಹು ಮುಖ್ಯ ಆದ್ಯತೆ ಅಂದ್ರೆ ಅದು ನಮ್ಮ ಮಕ್ಕಳ ಆರೋಗ್ಯ. ಕೊರೋನಾ ಭೀತಿಯ ನಡುವೆ ಯಾವುದೇ ಕಾರಣಕ್ಕೂ ಶಾಲೆಗಳನ್ನು ಆರಂಭಿಸಲ್ಲ. ಸೆಪ್ಟೆಂಬರ್ ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದರು.

PUC ದಾಖಲಾತಿ, ಶೈಕ್ಷಣಿಕ ಚಟುವಟಿಕೆ ಆರಂಭಕ್ಕೆ ಆದೇಶ: ಶಾಲೆ ಪ್ರಾರಂಭ ಯಾವಾಗ...?

ಕೊರೋನಾ ಭೀತಿಯ ನಡುವೆಯೂ ಶಾಲೆ ಹೇಗೆ ಆರಂಭಿಸಬೇಕು? ಏನೆಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು? ಯಾವ ರೀತಿ ಮುಂದುವರಿಸಬಹುದು..? ಎನ್ನುವುದಕ್ಕೆ ಈಗಾಗಲೇ ನಮ್ಮ ರಾಜ್ಯದಲ್ಲಿ ವಿದ್ಯಾಗಮನ ಎಂಬ ಯೋಜನೆಯನ್ನು ತರಲಾಗಿದೆ  ಎಂದು ತಿಳಿಸಿದರು.

ಕೊರೋನಾ ಕಾಲದಲ್ಲಿ ನಮ್ಮ ಮಕ್ಕಳು ಯಾವುದೇ ಕಾರಣಕ್ಕೂ ಕೊರೋನಾ ಭೀತಿಗೆ ಒಳಗಾಗಬಾರದು. ಇನ್ನು ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದೇವೆ. ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್​ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಶಿಕ್ಷಣ ಇಲಾಖೆಯಿಂದ ಸಮಾಜಕ್ಕೆ ಭರವಸೆ ನೀಡುವ ಕಾರ್ಯವಾಗ್ತಿದೆ ಎಂದು ಮಾಹಿತಿ ನೀಡಿದರು

ಸೆಪ್ಟೆಂಬರ್‌ನಿಂದ ಶಾಲೆ ಪ್ರಾರಂಭಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿ ತಯಾರಿಗಳನ್ನ ಮಾಡಿಕೊಳ್ಳುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಸುರೇಶ್ ಕುಮಾರ್ ಅವರೇ ಸ್ಪಷ್ಟನೆ ಕೊಟ್ಟಿದ್ದು, ಸೆಪ್ಟೆಂಬರ್‌ನಲ್ಲೂ ಶಾಲೆ ಪ್ರಾರಂಭ ಇಲ್ಲ ಎನ್ನುವುದು ಸ್ಪಷ್ಟವಾದಂತಾಯ್ತು.