ಬೆಂಗಳೂರು(ಆ.30): ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶನಾಲಯ ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ, ಸರ್ಕಾರಿ/ಅನುದಾನಿತ ಕಾಲೇಜುಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ 2019-20ನೇ ಸಾಲಿನಲ್ಲಿ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಸಲು 52.12 ಕೋಟಿ ರು.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.

 ಜಿಲ್ಲಾ ಉಪ ನಿರ್ದೇಶಕರು ಕೂಡಲೇ ಕ್ರಮ ಕೈಗೊಂಡು ತಮ್ಮ ವ್ಯಾಪ್ತಿಯ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ 2019-20ನೇ ಸಾಲಿನಲ್ಲಿ ಬಾಕಿ ಇರುವ ಫೆಬ್ರವರಿ ತಿಂಗಳ ವೇತನ ಹಾಗೂ ಬಿಲ್ಲುಗಳನ್ನು ಪಾವತಿಸುವಂತೆ ಸೂಚಿಸಲಾಗಿದೆ. 

ಕೆ-ಸೆಟ್ ಪರೀಕ್ಷೆಗೆ ದಿನಾಂಕ ಪ್ರಕಟ: ಆಲ್‌ ದಿ ಬೆಸ್ಟ್...

ಅನುದಾನಿತ ಪಿಯು ಕಾಲೇಜುಗಳ ಬಾಕಿ ಇರುವ ವೇತನವನ್ನು ಸಹ ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ. ಬಿಡುಗಡೆಗೊಳಿಸಲಾದ ಅನುದಾನವನ್ನು ಸಕಾಲದಲ್ಲಿ ಬಳಸಿ ಖರ್ಚು ಮಾಡಿರುವ ಲೆಕ್ಕವನ್ನು ಪಿಯು ನಿರ್ದೇಶಕರ ಕಚೇರಿಗೆ ಮಾಹಿತಿ ನೀಡುವಂತೆ ಪಿಯು ಇಲಾಖೆ ನಿರ್ದೇಶಕಿ ಎಂ. ಕನಗವಲ್ಲಿ ತಿಳಿಸಿದ್ದಾರೆ.