ಬೆಂಗಳೂರು (ಆ.20): ಕನ್ನಡಕ್ಕೆ ಅನುವಾದಗೊಂಡಿರುವ ದ್ವಿತೀಯ ಪಿಯುಸಿಯ ಎನ್‌ಸಿಆರ್‌ಟಿ ವಿಜ್ಞಾನ ಮತ್ತು ಗಣಿತ ವಿಭಾಗದ ಪಠ್ಯಪುಸ್ತಕಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇನ್ಮುಂದೆ ಮಾರುಕಟ್ಟೆಯಲ್ಲೂ ಲಭ್ಯವಾಗಲಿವೆ.

ಸರ್ಕಾರ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು 2008-09ರಲ್ಲೇ ಕನ್ನಡಕ್ಕೆ ಅನುವಾದಿಸಿ ಪುಸ್ತಕ ಮುದ್ರಣ ಮತ್ತು ಸರಬರಾಜು ಏಜೆನ್ಸಿಗಳ ಮೂಲಕ ನೇರವಾಗಿ ಶಾಲೆಗಳಿಗೆ ಕಳುಹಿಸಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿತ್ತು. ಇದೀಗ ಈ ಪುಸ್ತಕಗಳನ್ನು ಮಾರುಕಟ್ಟೆಗೂ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ...

ಇದರಿಂದ ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಿತ ಶಾಸ್ತ್ರ ಪುಸ್ತಕಗಳು ಇನ್ಮುಂದೆ ಮಾರುಕಟ್ಟೆಯಲ್ಲೂ ಲಭ್ಯವಾಗಲಿವೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಗುರುವಾರ ಅಧಿಕೃತವಾಗಿ ಈ ಪುಸ್ತಕಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದ್ದಾರೆ.