ಬೆಂಗಳೂರು (ಆ.25): ಶಿಕ್ಷಣ ಇಲಾಖೆಯಲ್ಲಿ ಕೆಲವು ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದ್ದು, ಬಹುತೇಕರು ಕ್ವಾರಂಟೈನ್‌ನಲ್ಲಿರುವ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ 2020-21ನೇ ಸಾಲಿನ ಆರ್‌ಟಿಇ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಂದೂಡಿದೆ.

 ಮುಂದೂಡಿದ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ರಾಷ್ಟ್ರೀಯ ನೇಮಕಾತಿ ಏಜೆನ್ಸಿಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ...

ಮೊದಲನೇ ಸುತ್ತಿನಲ್ಲಿ ಕೆಲವು ದೂರುಗಳು ಸಹ ಇನ್ನೂ ಇತ್ಯರ್ಥವಾಗದೇ ಇರುವುದರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ ಮುಂದೂಡಲಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.