ಕೊರೋನಾ ಮಹಾಮಾರಿ ಅಟ್ಟಹಾಸ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಫೂರ್ಣ ವಿಚಲಿತವಾಗಿದ್ದು, ಇದೀಗ ಮತ್ತೆ ಆರಂಭದ ಬಗ್ಗೆ ಸೂಚನೆ ನೀಡಲಾಗಿದೆ. ಡಿಪ್ಲೊಮಾ ತರಗತಿಗಳ ಪ್ರವೇಶಾತಿಗೂ ದಿನಾಂಕ ನಿಗದಿ ಮಾಡಲಾಗಿದೆ.

ಬೆಂಗಳೂರು (ಆ.30): ರಾಜ್ಯದ ಖಾಸಗಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ತರಗತಿಗಳಿಗೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಸೆ.30ರೊಳಗೆ ಪ್ರವೇಶ ಕಲ್ಪಿಸುವಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಜ್ಯದ ಖಾಸಗಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಡಿಪ್ಲೊಮಾ ಪ್ರವೇಶಾತಿ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. 2020-21ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ಸೆ.30ರೊಳಗೆ ಪ್ರವೇಶ ನೀಡಬೇಕು. ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಪ್ರವೇಶ ಪ್ರಕ್ರಿಯೆ ನಡೆಸಿದರೆ ಸಂಬಂಧಪಟ್ಟಪ್ರಾಂಶುಪಾಲರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ವಿವಾಹ: ಉದ್ಯೋಗದಲ್ಲಿ ಕಾಂಪ್ರಮೈಸ್ ಮಾಡಿಕೊಂಡವರಿವರು.

ಕರ್ನಾಟಕದ ಅಭ್ಯರ್ಥಿಗಳಾದರೆ ನಿಗದಿತ ದಾಖಲೆ, ಆಟೋಮೊಬೈಲ್‌ ಕೋರ್ಸ್‌ಗೆ ಪ್ರವೇಶ ಪಡೆಯಲು ಇರಬೇಕಾದ ಕನಿಷ್ಠ ವಯೋಮಿತಿ, ಪ್ರವೇಶ ಸಂಖ್ಯೆ ಮಿತಿಗೊಳಿಸಿ (ಇನ್‌ಟೇಕ್‌) ಮಾನ್ಯತೆ ಪಡೆದ ಕೋಸ್‌ಗಳಿಗೆ ಮಾತ್ರ ಪ್ರವೇಶ ನೀಡಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ತತ್ಸಮಾನ ಕೋರ್ಸ್‌ಗಳಿಗೆ ಸಂಬಂಧಿಸಿದ ಅಂಕಪಟ್ಟಿ, ಮೂಲ ವರ್ಗಾವಣೆ ಪ್ರಮಾಣಪತ್ರ, ವ್ಯಾಸಂಗ ಪ್ರಮಾಣ ಪತ್ರ ಹಾಗೂ ಜಾತಿ ಪ್ರಮಾಣ ಪತ್ರ ಸೇರಿದಂತೆ ಎಲ್ಲ ದಾಖಲೆಗಳನ್ನು ಪರಿಶೀಲಿಸಿಯೇ ಪ್ರವೇಶ ಪ್ರಕ್ರಿಯೆ ನಡೆಸಬೇಕು ಎಂದು ಇಲಾಖೆ ಸೂಚಿಸಿದೆ.

ಕೆ-ಸೆಟ್ ಪರೀಕ್ಷೆಗೆ ದಿನಾಂಕ ಪ್ರಕಟ: ಆಲ್‌ ದಿ ಬೆಸ್ಟ್...

ವಿದೇಶಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡರೆ ಕೇಂದ್ರ ಸರ್ಕಾರದಿಂದ ಅನುಮತಿ ಪತ್ರ ಪಡೆದಿರಬೇಕು. ಕರ್ನಾಟಕದ ಅಭ್ಯರ್ಥಿಗಳಿಗೆ ಬೋಧನಾ ಶುಲ್ಕ, ಅಭಿವೃದ್ಧಿ ಶುಲ್ಕ ಹಾಗೂ ಇತರೆ ಶುಲ್ಕ ಸೇರಿ 13,405 ರು. ಹಾಗೂ ಕರ್ನಾಟಕೇತರ ಅಭ್ಯರ್ಥಿಗಳಿಗೆ ಬೋಧನಾ ಶುಲ್ಕ, ಅಭಿವೃದ್ಧಿ ಶುಲ್ಕ ಹಾಗೂ ಇತರೆ ಶುಲ್ಕ ಸೇರಿ 20,755 ರು. ಪಡೆಯಬೇಕು ಎಂದು ನಿರ್ದೇಶನ ನೀಡಿದೆ.