ನವದೆಹಲಿ(ಮೇ.02): ಅವರಿಬ್ಬರೂ ರಾಜಕಾರಣದ ಮೊಗಸಾಲೆಯಲ್ಲಿ ಪರಸ್ಪರ ವಿರುದ್ಧ ದಿಕ್ಕಿನತ್ತ ಮುಖ ಮಾಡಿ ನಿಂತವರು. ಇಬ್ಬರೂ ದೇಶದ ಪ್ರಮುಖ ರಾಜಕಾರಣಿಗಳಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಜನಾಶೀರ್ವಾದ ಪಡೆಯಲು ಕಸರತ್ತು ನಡೆಸಿದ್ದಾರೆ. ಆದರೆ ಈ ರಾಜಕಾರಣಿಗಳ ಪುತ್ರರು ಮಾತ್ರ CBSE 12ನೇ ತರಗತಿಯಲ್ಲಿ ಉತ್ತಮ ಅಂಕಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.

ಇಂದು CBSE 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರ ಜೊಹರ್ ಇರಾನಿ ಶೇ.91ರಷ್ಟು ಅಂಕಗಳಿಸಿದ್ದರೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪುತ್ರ ಪುಲ್ಕಿತ್ ಕೇಜ್ರಿವಾಲ್ ಶೇ.96.4ರಷ್ಟು ಅಂಕಗಳಿಸಿ ಗಮನ ಸೆಳೆದಿದ್ದಾರೆ.

ಈ ವರ್ಷ ಒಟ್ಟು ಶೇ. 83.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಇವರಲ್ಲಿ ಶೇ.88.70ರಷ್ಟು ಬಾಲಕಿಯರು ತೇರ್ಗಡೆ ಹೊಂದಿದ್ದು, ಶೇ.79.40ರಷ್ಟು ಬಾಲಕರು ಪಾಸ್ ಆಗಿದ್ದಾರೆ. 

DPS ಗಾಜಿಯಾಬಾದ್ ನ ವಿದ್ಯಾರ್ಥಿನಿ ಹಂಸಿಕಾ ಶುಕ್ಲಾ ಹಾಗೂ ಎಸ್ ವಿ ಸ್ಕೂಲ್ ಮುಜಫ್ಫರ್ ನಗರದ ಕರಿಶ್ಮಾ ಅರೋರಾ ದೇಶದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇಬ್ಬರೂ ವಿದ್ಯಾರ್ಥಿನಿಯರು ಸಮಾನ ಅಂಕಗಳನ್ನು ಗಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.