Asianet Suvarna News Asianet Suvarna News

ಮತ್ತೆ ವಿಸ್ತರಣೆಯಾದ ಲಾಕ್‌ಡೌನ್: SSLC, PUC, ಪದವಿ ಪರೀಕ್ಷೆ ಕತೆ ಏನ್..?

ಮೇ.18ರಿಂದ ನಾಲ್ಕನೇ ಹಂತರ ಲಾಕ್‌ಡೌನ್ ಶುರುವಾಗಲಿದ್ದು, ಕೇಂದ್ರ ಸರ್ಕಾರ ಹೊಸ ಮಾರ್ಗ ಸೂಚಿಗಳನ್ನು ಪ್ರಕಟಿಸಿದೆ. ಆದ್ರೆ, ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ.

SSLC PUC Degree Students worried about Exams Over lockdown extended Till 31
Author
Bengaluru, First Published May 17, 2020, 8:24 PM IST

ಬೆಂಗಳೂರು, (ಮೇ.17):  ಕೇಂದ್ರ ಸರ್ಕಾರ ಲಾಕ್ ಡೌನ್ ಅನ್ನು ಮೇ.31ರ ವರೆಗೆ ವಿಸ್ತರಿಸಿದ್ದು, 4 ನೇ ಹಂತದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಂತೆ ಶಾಲಾ, ಕಾಲೇಜ್, ಶೈಕ್ಷಣಿಕ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಬಾಕಿ ಉಳಿದಿರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ (ಇಂಗ್ಲಿಷ್)  ಪರೀಕ್ಷೆ ಕತೆ ಏನು ಎನ್ನುವುದು ಭಾರೀ ಗೊಂದಲ ಮೂಡಿಸಿದೆ. 

ಎಸ್ಸೆಸ್ಸೆಲ್ಸಿ ಪರೀಕ್ಷೆ, ದಿನಾಂಕ, ವೇಳಾಪಟ್ಟಿ: ಅಂತಿಮ ನಿರ್ಧಾರ ಪ್ರಕಟಿಸಿದ ಸುರೇಶ್ ಕುಮಾರ್

ಮೇ 18 ರ ನಂತರ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದು, ಜೂನ್‌ನಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಇನ್ನು ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡುವ ಬಗ್ಗೆ ಚರ್ಚೆಗಳು ಸಹ ನಡೆದಿವೆ.

ಆದರೆ ಮೇ 31 ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ವಿಚಾರ ಕುರಿತು ಗೊಂದಲ ಮುಂದುವರೆದಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಮತ್ತೆ ಆತಂಕ ಶುರುವಾಗಿದ್ದಂತೂ ಸತ್ಯ.

ಮೋದಿ ಹೇಳಿದಂತೆ ಮೇ.31ರ ವರೆಗೆ ಲಾಕ್‌ಡೌನ್ ವಿಸ್ತರಣೆ‌: ಏನಿರುತ್ತೆ? ಏನಿರಲ್ಲ? 

ಅಂತಹ ಯಾವುದೇ ಭಯ ಅಥವಾ ಗೊಂದಲಗಳಿಗೆ ಒಳಗಾಗುವುದು ಬೇಡ. ಈಗಾಗಲೇ ಸುರೇಶ್ ಕುಮಾರ್‌ ಅವರು ಜೂನ್‌ ಕೊನೆಯಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆಸಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಈಗಾಗಲೇ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸಿಬಿಎಸ್‌ಇ ಮೇ 18 ರಂದು 10, 12 ನೇ ಪರೀಕ್ಷೆಗೆ ಮೇ 18 ರಂದು ದಿನಾಂಕ ಪ್ರಕಟಿಸುವುದಾಗಿ ಹೇಳಿದೆ. ಆದ್ರೆ, ಇದೀಗ ಮತ್ತೆ ಲಾಕ್‌ಡೌನ್ ವಿಸ್ತರಣೆಯಾಗಿರುವುದರಿಮದ ಮುಂದೆ ಏನಾಗುತ್ತೋ ಎನ್ನುವುದನ್ನು ಕಾದುನೋಡಬೇಕಿದೆ.

Follow Us:
Download App:
  • android
  • ios