ಈ 2 ಜಿಲ್ಲೆಗಳಲ್ಲಿ SSLC ಪರೀಕ್ಷೆಯ ಮೌಲ್ಯಮಾಪನ ಮುಂದೂಡಿಕೆ

2020ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ದಿನಾಂಕ 13-7-2020ರಿಂದ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಪ್ರಾರಂಭವಾಗಲಿವೆ. ಆದ್ರೆ, ಎರಡು ಜಿಲ್ಲೆಗಳಲ್ಲಿ ಮಾತ್ರ ಮೌಲ್ಯಮಾಪನ ಮುಂದೂಡಿಕೆ ಮಾಡಲಾಗಿದೆ.

sslc valuation postponed In Bengaluru City and Rural District Over Lockdwon

ಬೆಂಗಳೂರು, (ಜುಲೈ.12): ಇತ್ತೀಚಿಗಷ್ಟೇ ಮುಕ್ತಾಯವಾದ 2020ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ನಾಳೆಯಿಂದ (ಜುಲೈ 14) ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿವೆ. ಆದ್ರೆ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾತ್ರ ಮೌಲ್ಯಮಾಪನವನ್ನು ಮುಂದೂಡಲಾಗಿದೆ.

ಈ ಬಗ್ಗೆ ಇಂದು (ಭಾನುವಾರ)  ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಇತ್ತೀಚಿಗಷ್ಟೇ ಮುಕ್ತಾಯವಾದ 2020ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಸೋಮವಾರದಿಂದ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಪ್ರಾರಂಭವಾಗಬೇಕಿದೆ. ಆದರೆ ರಾಜ್ಯ ಸರ್ಕಾರ ಜುಲೈ 14 ರಿಂದ 22 ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಈ ಎರಡು ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳ ಮೌಲ್ಯಮಾಪನ ಕಾರ್ಯವು ನಿಗದಿಯಂತೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

'ಪರೀಕ್ಷೆ ಹೇಗಾಯ್ತು..? ಫೋನಲ್ಲೇ ಪಾಯಸ ಕಳಿಸಲಾ..'? ವಿದ್ಯಾರ್ಥಿನಿಗೆ ಸಚಿವರ ಕಾಲ್ 

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಮೌಲ್ಯಮಾಪನ ಮುಂದೂಡಿಕೆಯಾಗಿದ್ದು, ಹೊಸ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಎಂದರು.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕೆಲ ರಾಜ್ಯಗಳಲ್ಲಿ ಹತ್ತನೇ ತರಗತಿ ಪರೀಕ್ಷೆಗಳನ್ನ ರದ್ದು ಮಾಡಲಾಗಿದೆ. ಆದ್ರೆ, ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿ ಪರೀಕ್ಷೆಗಳನ್ನು ಮುಗಿಸಿದೆ. ಇದರ ಕೀರ್ತಿ ಸಚಿವ ಸುರೇಶ್ ಕುಮಾರ್ ಅವರಿಗೆ ಸಲ್ಲುತ್ತದೆ.

ಇನ್ನು ಈ ಪರೀಕ್ಷೆಯ ಫಲಿತಾಂಶ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಸ್ವತಃ ಸುರೇಶ್ ಕುಮಾರ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದು, ಕೊರೋನಾ ಭಯದಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು ರಿಸಲ್ಟ್‌ಗಾಗಿ ಕಾದು ಕುಳಿತ್ತಿದ್ದಾರೆ.

Latest Videos
Follow Us:
Download App:
  • android
  • ios