ನವದೆಹಲಿ (ಜು. 24): ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಎನ್‌ಐಟಿ (ನ್ಯಾಷನಲ್‌ ಇನ್ಸಿಟ್ಯೂಟ್‌ ಆಫ್‌ ಟೆಕ್ನಾಲಜಿ)ಗಳಿಗೆ ಪ್ರವೇಶ ಮಾನದಂಡವನ್ನು ಸಡಿಲಿಸಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಗುರುವಾರ ಪ್ರಕಟಿಸಿದೆ.

ಹೀಗಾಗಿ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಗೆ ಆಯ್ಕೆ ಆದ ಅಭ್ಯರ್ಥಿಗಳು ಎನ್‌ಐಟಿಗಳಲ್ಲಿ ಸ್ಥಾನ ಪಡೆಯಲು 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೆ ಸಾಕು. ವಿದ್ಯಾರ್ಥಿಗಳು ಗಳಿಸಿದ ಅಂಕವನ್ನು ಪರಿಗಣಿಸುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ. ಈ ಮುನ್ನ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಜೆಇಇಗೆ ಅರ್ಹತೆ ಪಡೆಯುವುದರ ಜೊತೆಗೆ 12ನೇ ತರಗತಿಯಲ್ಲಿ ಕನಿಷ್ಠ ಶೇ.75ರಷ್ಟುಅಂಕ ಪಡೆದಿರಬೇಕು ಎಂದು ತಿಳಿಸಲಾಗಿತ್ತು.

ಶಾಸಕರೇ, ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ, ಅಭಿವೃದ್ಧಿಪಡಿಸಿ