ನವದೆಹಲಿ/ಬೆಂಗಳೂರು, (ಜೂನ್.17): ಇದೇ 25ರಿಂದ ಕರ್ನಾಟಕದಲ್ಲಿ ನಡೆಯಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ.

ಈ ಮೂಲಕ ಎಸ್​ಎಸ್​ಎಲ್​ಸಿ ಪರೀಕ್ಷೆಯ ಹಾದಿ ಸುಗಮವಾಗಿದ್ದು, ಪರೀಕ್ಷೆಯು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ.

ಸುಪ್ರೀಂಕೋರ್ಟ್ ಅಂಗಳಕ್ಕೆ ಕರ್ನಾಟಕ SSLC ಪರೀಕ್ಷೆ: ರದ್ದಾಗುತ್ತಾ? ನಡೆಯುತ್ತಾ? 

ಕೊರೋನಾ ವೈರಸ್​ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ  ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡುವಂತೆ ಬೆಳಗಾವಿಯ ರಾಜಶ್ರೀ ಎಂಬುವವರು ಕೋರಿದ್ದರು. 

ಮಕ್ಕಳು ಭಯದ ವಾತಾವರಣದಲ್ಲಿ ಪರೀಕ್ಷೆ ಬರೆಯುವ ಪರಿಸ್ಥಿತಿ ಬರುತ್ತದೆ. ಇದು ಸರಿಯಲ್ಲ. ಇದಾಗಲೇ ಕೆಲವು ರಾಜ್ಯಗಳಲ್ಲಿ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ರದ್ದಾಗಬೇಕಿದೆ ಎಂದು ಅವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆದ್ರೆ, ಈ ಅರ್ಜಿಯನ್ನು ಮಾನ್ಯ ಮಾಡಲು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ಪೀಠ ನಿರಾಕರಿಸಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಉಂಟಾಗಿದ್ದ ಕಗ್ಗಂಟು ಇದೀಗ ಕ್ಲಿಯರ್ ಆಗಿದೆ.ಇದರಿಂದ ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಜೂನ್ 25ರಿಂದ ಜುಲೈ 3ರ ವರೆಗೆ ಪರೀಕ್ಷೆಗಳು ನಡೆಯಲಿವೆ.

ಪಿಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್....!

ಈ ಹಿಂದೆಯೂ ವಕೀಲರೊಬ್ಬರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದಂತೆ ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಹಾಕಿದ್ದರು. ಆದ್ರೆ, ಇದನ್ನ ವಜಾ ಮಾಡಿದ್ದ ಹೈಕೋರ್ಟ್ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಿ ಎಂದು ರಾಜ್ಯ ಸರ್ಕಾರ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹದುದು.