ಬೆಂಗಳೂರು, (ಮೇ.22): ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ( ಸಿಟಿಇಟಿ) ಒಂದೇ ದಿನ ನಡೆಯುವ ಕಾರಣಕ್ಕೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ದಿನಾಂಕವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದೆ.

ಜು. 5ರಂದು ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಜು.12ಕ್ಕೆ ನಡೆಸಲು ತೀರ್ಮಾನಿಸಲಾಗಿದೆ. ಈ  ಬಗ್ಗೆ ಇಂದು (ಶುಕ್ರವಾರ) ಬೆಂಗಳೂರು ಆಕಾಶವಾಣಿ ಸಂದರ್ಶನದಲ್ಲಿ ಮಾತನಾಡುವ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.

ಕೊರೋನಾದಿಂದ ಮುಂದೂಡಿಕೆಯಾಗಿದ್ದ TET ಪರೀಕ್ಷಾ ದಿನಾಂಕ ಪ್ರಕಟ

ಜು. 5ರಂದು ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯ ದಿನದಂದು ಸಿಟಿಇಟಿ ಪರೀಕ್ಷೆ ನಡೆಯಲಿದೆ. ಇದರಿಂದ ಕರ್ನಾಟಕದ ಅಭ್ಯರ್ಥಿಗಳಿಗೆ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಟಿಇಟಿ ಪರೀಕ್ಷೆಯ ದಿನಾಂಕವನ್ನು ಮತ್ತೂಮ್ಮೆ ಪರಿಷ್ಕರಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಟಿಇಟಿ ಪರೀಕ್ಷೆಯನ್ನು ಜು.12ಕ್ಕೆ ನಡೆಸಲಾಗುವುದು. ಮಾರ್ಚ್‌ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಕೋವಿಡ್-19 ಕಾರಣಕ್ಕೆ ಮುಂದೂಡಲಾಗಿತ್ತು. ಈಗ ಪರಿಷ್ಕೃತಗೊಳಿಸಿ ಜು. 12ರಂದು ನಡೆಸಲು ನಿರ್ಧರಿಸಿದ್ದೇವೆ. ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.