ನವದೆಹಲಿ, (ಸೆ.01): ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್​ಟಿಎ), 2019 ಸಾಲಿನ ಯುಜಿಸಿ ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯ ಅರ್ಜಿ ಸಲ್ಲಿಕೆಗೆ ಪ್ರಕಟಣೆ ಹೊರಡಿಸಿದೆ.

ಸೆಪ್ಟೆಂಬರ್ 9 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 9 ಅರ್ಜಿ ಸಲ್ಲಿಸಲು ಕಡೇ ದಿನವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು  ಎನ್​ಟಿಎ ಅಧಿಕೃತ ವೆಬ್​ಸೈಟ್​ (ntanet.nic.in)ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಜಾಬ್ಸ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 800 ರು., ಹಿಂದುಳಿದ ವರ್ಗ, ಇಡಬ್ಲ್ಯುಎಸ್​ ಅಭ್ಯರ್ಥಿಗಳಿಗೆ 400 ರು. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 200 ರು. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. 

ಶೈಕ್ಷಣಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಕನಿಷ್ಠ ಶೇ.55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 

ಸ್ನಾತಕೋತ್ತರ ಪದವಿಯ ಮೊದಲ ವರ್ಷ ಪೂರ್ಣಗೊಳಿಸಿರುವವರು, ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಎನ್​ಟಿಎ ವೆಬ್​ಸೈಟ್​​ನಲ್ಲಿ ಪರಿಶೀಲಿಸಬಹುದು.

ಪರೀಕ್ಷೆ ದಿನಾಂಕ: ಡಿಸೆಂಬರ್ 2 ರಿಂದ 6 ವರೆಗೆ ದೇಶಾದ್ಯಂತ ನಿಗದಿತ ಕೇಂದ್ರಗಳಲ್ಲಿ ಆನ್​ಲೈನ್ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 31 ರಂದು ಫಲಿತಾಂಶ ಪ್ರಕಟವಾಗಲಿದೆ.